ನನ್ನೂರು

Author : ಎಚ್.ಎಲ್. ನಾಗೇಗೌಡ

Pages 359

₹ 75.00




Year of Publication: 2010
Published by: ಕನ್ನಡ ಮತ್ತು ಸಂಸ್ಕೃತಿ ಇಲಾಖೆ
Address: ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು- 560 002

Synopsys

‘ನನ್ನೂರು’ ಜಾನಪದ ತಜ್ಞ, ನಾಡೋಜ ನಾಗೇಗೌಡ ಎಚ್.ಎಲ್ ಅವರ ಕೃತಿ. ನಾಗೇಗೌಡರ ಹುಟ್ಟೂರಾದ ಹೆರಗನಹಳ್ಳಿಯ ಕಳೆದುಹೋದ ಜನಸಮುದಾಯದ ಬದುಕಿನ ಚಿತ್ರಣವನ್ನು ಈ ಕೃತಿಯಲ್ಲಿ ಕಾಣಬಹುದಾಗಿದೆ. ಐವತ್ತು ವರ್ಷಗಳ ಕಾಲ ತಾವು ಕಂಡುಂಡ ಹಳ್ಳಿಗಾಡಿನ ಬದುಕು ಬವಣೆಗಳನ್ನು ಈ ಕೃತಿಯಲ್ಲಿ ಅತ್ಯಂತ ಸೂಕ್ಷ್ಮವಾಗಿ ಚಿತ್ರಿಸಿದ್ದಾರೆ.

About the Author

ಎಚ್.ಎಲ್. ನಾಗೇಗೌಡ
(11 February 1915 - 10 September 2005)

ಜಾನಪದ ತಜ್ಞ, ಸಾಹಿತಿ, ದಕ್ಷ ಆಡಳಿತಗಾರರೆನಿಸಿದ್ದ ನಾಗೇಗೌಡರು ಹುಟ್ಟಿದ್ದು ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಹೆರಗನ ಹಳ್ಳಿಯ ‘ದೊಡ್ಡಮನೆ’ ಕುಟುಂಬದಲ್ಲಿ. ತಂದೆ ಲಿಂಗೇಗೌಡ, ತಾಯಿ ಹುಚ್ಚಮ್ಮ. ಪ್ರಾಥಮಿಕ ವಿದ್ಯಾಭ್ಯಾಸ ಅಳೀಸಂದ್ರ ಹಾಗೂ ನಾಗತಿಹಳ್ಳಿಯಲ್ಲಿ ಮುಗಿಸಿದ ಅವರು ಮಾಧ್ಯಮಿಕ ಮತ್ತು ಪ್ರೌಢ ಶಿಕ್ಷಣವನ್ನು ಚನ್ನರಾಯಪಟ್ಟಣದಲ್ಲಿ ಪೂರ್ಣಗೊಳಿಸಿದರು. ಬೆಂಗಳೂರಿನಲ್ಲಿ ಇಂಟರ್ ಮೀಡಿಯೆಟ್‌, ಮೈಸೂರಿನಲ್ಲಿ ಬಿ.ಎಸ್ಸಿ, ಮತ್ತು ಪೂನದಲ್ಲಿ ಎಲ್‌.ಎಲ್‌.ಬಿ ಪದವಿ ಪಡೆದರು. ಮುನ್ಸೀಫ್ ಕೋರ್ಟಿನಲ್ಲಿ ಹೆಡ್ ಮುನ್ಷಿಯಾಗಿ ವೃತ್ತಿ ಆರಂಭಿಸಿದ್ದು ನರಸಿಂಹರಾಜಪುರದಲ್ಲಿ.  ಆನಂತರ ಮೈಸೂರು ಸಿವಿಲ್‌ ಸರ್ವೀಸ್‌ನ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ರೆವಿನ್ಯೂ ಇಲಾಖೆಯಲ್ಲಿ ಪ್ರೊಬೆಷನರಿ ಅಧಿಕಾರಿಯಾಗಿ ಆಯ್ಕೆಯಾದರು.  ಅಲ್ಲದೆ ...

READ MORE

Related Books