ಅರೆ ಮಲೆನಾಡಿನ ಸಹಜ ಬದುಕಿನ ಚಿತ್ರಣ ‘ನರವಿಂಧ್ಯ' ಕತಾ ಸಂಕಲನ. ಮಾನವೀಯತೆಯ ಕರುಳೊಂದು ಸ್ಥಾಯಿಯಾಗಿ ಮಿಡಿದಿದೆ. ನಿರುದ್ಯೋಗದ ಶೈಲಿಯಲ್ಲಿ, ತಣ್ಣಗೆ ತಮ್ಮನ್ನು ಬಿಚ್ಚಿಕೊಳ್ಳುತ್ತಾ ಸಾಗುವ ಕತೆಗಳ ಆಳದಲ್ಲಿ ಮಡುಗಟ್ಟಿರುವ ವಿಷಾದದ ಛಾಯೆ ಓದುಗರನ್ನು ಕಲಕುತ್ತದೆ.
ಕಥೆಗಾರ ಕಂನಾಡಿಗಾ ನಾರಾಯಣ ಅವರದು ಕನ್ನಡ ಕಥನ ಪರಂಪರೆಯಲ್ಲಿ ಒಂದು ವಿಶಿಷ್ಟ ಸಂವೇದನೆ. ಪ್ರಾಣಿಲೋಕದೊಳಗಿನ ಮನುಷ್ಯ ಜಗತ್ತು. ಮನುಷ್ಯನೊಳಗಿರುವ ಮೃಗಲೋಕ ಎರಡರ ತಾಕಲಾಟಗಳನ್ನೂ ಒಂದು ಹದದಲ್ಲಿ ಹಿಡಿಯುವ ಇವರ ಕತೆಗಳು ಹೊಸ ಜಗತ್ತೊಂದನ್ನು ತೆರೆದಿಡುತ್ತವೆ. ಹಾಗೆಂದು ಇವೆರಡೇ ಇವರ ಆಸಕ್ತಿಯ ವಿಷಯವಲ್ಲ. ಸಮಾಜದಲ್ಲಿ ಬೇರೆ ಬೇರೆ ಸಂದರ್ಭಗಳಲ್ಲಿ ತಮ್ಮದಲ್ಲದ ತಪ್ಪಿಗೆ ಸಂದಿಗ್ಧತೆಯನ್ನು ಅನುಭವಿಸುವ ಅನೇಕ ಬಗೆಯ ಜನರ ನೋವುಗಳನ್ನು ಸೂಕ್ಷ್ಮವಾಗಿ ನಾರಾಯಣ ಅವರು ಹಿಡಿದಿಡುತ್ತಾರೆ. ಇಂತಹ ಮನುಷ್ಯ ವೇದನೆಯ ಕತೆಗಳನ್ನು ಕಡೆಯುವಾಗ ಕೊಂಚ ಜನಪ್ರಿಯ ದಾರಿಯನ್ನು ಹಿಡಿಯುವ ನಾರಾಯಣ ಅವರ ಕಥೆಗಳು ಪ್ರಾಣಿಗಳ ಲೋಕದ ತಾಕಲಾಟಗಳನ್ನು ಕಾಣಿಸಹೊರಟಾಗ ...
READ MORE