ಕಾದಂಬರಿಕಾರ್ತಿ ಎಂದೇ ಖ್ಯಾತಿಯ ಎಂ.ಕೆ.ಇಂದಿರಾ ಅವರ ಕಥಾ ಸಂಕಲನ-ನವರತ್ನ. ಈ ಕೃತಿಗೆ ರಾಜ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ದೊರಕಿದೆ. ಕಥೆಗಳನ್ನು ಪರಿಣಾಮಕಾರಿಯಾಗಿ ಬರೆಯಬಲ್ಲರು ಎಂಬುದನ್ನು ಈ ಕೃತಿಯ ಮೂಲಕ ಅವರು ತೋರಿದ್ದಾರೆ. ಕಥೆಯ ವಸ್ತುಗಳ ವೈವಿಧ್ಯತೆ, ನಿರೂಪಣಾ ಶೈಲಿಯೊಂದಿಗೆ ಓದುಗರನ್ನು ಸೆಳೆಯುತ್ತವೆ.
ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಪ್ರಸಿದ್ದ ಕಾದಂಬರಿಗಾರ್ತಿಯರಲ್ಲಿ ಒಬ್ಬರಾದ ಎಂ.ಕೆ.ಇಂದಿರ ಹುಟ್ಟಿದ್ದು 05-01-1917 ರಂದು. ಊರು ಮಲೆನಾಡಿನ ತೀರ್ಥಹಳ್ಳಿ. ತಂದೆ ತರೀಕೆರೆ ಸೂರ್ಯನಾರಾಯಣ, ತಾಯಿ ಬನಶಂಕರಮ್ಮ. ಇಂದಿರಾ ಓದಿದ್ದು, ಕನ್ನಡ ಮಾಧ್ಯಮಿಕ ಶಾಲೆಯ 2ನೇಯ ತರಗತಿವರೆಗೆ ಮಾತ್ರ. ತಮ್ಮ 12 ವರ್ಷಕ್ಕೆ ಮದುವೆಯಾಯಿತು. ಅವರು ಬರೆಯಲು ಆರಂಭಿಸಿದ್ದು 1963ರಲ್ಲಿ. ತುಂಗಭದ್ರ ಅವರ ಮೊದಲ ಕೃತಿ. ಮಲೆನಾಡಿನ ಸಹ್ಯಾದ್ರಿಶ್ರೇಣಿ, ಭೀಮವೃಕ್ಷರಾಜಿ, ಹಕ್ಕಿಗಳ ಇಂಚರ, ಹಸಿರು.ಇವೆಲ್ಲವೂ ಇಂದಿರ ಅವರ ಕಾದಂಬರಿಗಳಲ್ಲಿ ರಾರಾಜಿಸಿರುತ್ತವೆ. ಅವರ ಮೊಟ್ಟಮೊದಲ ಕಾದಂಬರಿ "ತುಂಗಭದ್ರ"."ತುಂಗಭದ್ರೆ"ಯನ್ನು ಮೆಚ್ಚಿಕೊಂಡು ಕೀರ್ತಿನಾಥ ಕುರ್ತಕೋಟಿಯವರು ಒಂದು ಧೀರ್ಘವಾದ ಮುನ್ನುಡಿ ಬರೆದರು.ಈ ಕಾದಂಬರಿ ವಿಶ್ವವಿದ್ಯಾನಿಲಯದ ಪದವಿ ...
READ MOREಕರ್ನಾಟಕ ಸಾಹಿತ್ಯ ಅಕಾಡೆಮಿ ಪುಸ್ತಕ ಬಹುಮಾನ 1967