ನವೋದಯ ಕಾವ್ಯ ಮತ್ತು ಬೇಂದ್ರೆ- ಅಭಿನವ ಪ್ರಕಾಶನದ ಸರಸ್ವತಿ ನೆನಪು ಮಾಲೆಯ ಕೃತಿ. ಈ ಕೃತಿಯಲ್ಲಿ ಬೇಂದ್ರೆಯವರ ಕುರಿತಾದ ಲೇಖನಗಳಿವೆ. ಖ್ಯಾತ ವಿಮರ್ಶಕರಾದ ಎಲ್.ಎಸ್.ಶೇಷಗಿರಿ ರಾವ್ ಅವರು 1987ರಲ್ಲಿ ಧಾರವಾಡದಲ್ಲಿ ಮಾಡಿದ ಭಾಷಣ ಮತ್ತು ಬೇಂದ್ರೆಯವರ ಕುರಿತಾದ ಮೂರು ಲೇಖನಗಳನ್ನು ಇಲ್ಲಿ ಸಂಗ್ರಹಿಸಲಾಗಿದೆ.
ಇಂಗ್ಲಿಷ್ ಪ್ರಾಧ್ಯಾಪಕರಾಗಿದ್ದ ಎಲ್.ಎಸ್. ಶೇಷಗಿರಿರಾವ್ ಅವರು ಪ್ರಬುದ್ಧ ವಿಮರ್ಶಕರೆಂದೇ ಖ್ಯಾತರು. ತಂದೆ ಸ್ವಾಮಿರಾವ್- ತಾಯಿ ಕಮಲಾಬಾಯಿ. 1925ರ ಫೆಬ್ರುವರಿ 16ರಂದು ಜನಿಸಿದರು. ಬೆಂಗಳೂರು ಮೈಸೂರುಗಳಲ್ಲಿ ವಿದ್ಯಾಭ್ಯಾಸ ಮಾಡಿದ ಇವರು ನಾಗಪುರ ವಿ.ವಿ.ಯಲ್ಲಿ ಇಂಗ್ಲಿಷ್ ಎಂ.ಎ. ಪದವೀಧರರಾದರು. ಕಾಲೇಜು ಶಿಕ್ಷಣ ಇಲಾಖೆಗೆ ಸೇರಿ ಕೋಲಾರ, ಮಡಿಕೇರಿ, ಬೆಂಗಳೂರುಗಳಲ್ಲಿ ಕಾಲೇಜು ಅಧ್ಯಾಪಕರಾಗಿ ಕೊನೆಯಲ್ಲಿ ಕೆಲವುಕಾಲ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದರು. 1947-50ರಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳಾಗಿ ಬಿ.ಎಂ.ಶ್ರೀ ಸ್ಮಾರಕ ಪ್ರತಿಷ್ಠಾನದ ಅಧ್ಯಕ್ಷರಾಗಿ ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಥಮ ಅಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ. ಕೇಂದ್ರ ಸಾಹಿತ್ಯ ಅಕಾಡೆಮಿ ...
READ MORE