ನಮ್ರತೆಯ ಪ್ರಾಮುಖ್ಯತೆಯನ್ನು ಗಾಂಧೀಜಿಯವರ ಜೀವನದ ಹಿನ್ನೆಲೆಯಲ್ಲಿ ಪರಿಣಾಮಕಾರಿಯಾಗಿ ವಿವರಿಸಿದ್ದಾರೆ ಹಿರಿಯ ಗಾಂಧಿವಾದಿ ನೀಲತ್ತಹಳ್ಳಿ ಕಸ್ತೂರಿ.ಮಲ್ಲೇಶ್ವರದ ಗಾಂಧಿ ಸಾಹಿತ್ಯ ಸಂಘ ಅವರ ಕರ್ಮಭೂಮಿ. ಇವರ ನಿರಂತರ ಪ್ರೋತ್ಸಾಹದಿಂದ ಸಂಚಯ ಎಂಬ ಉದಯೋನ್ಮುಖ ದ್ವೈಮಾಸಿಕ ಪತ್ರಿಕೆ ಬೆಳೆಯಿತು.ಜಿ.ಪಿ. ರಾಜರತ್ನಂ ಅವರನ್ನು ಕುರಿತು ಬರೆದಿರುವ ಜೀವನ ಚರಿತ್ರೆ ’ಆರದ ಬೆಳಕು’, ನ್ಯಾಷನಲ್ ಬುಕ್ ಟ್ರಸ್ಟ್ ಗಾಗಿ ಬರೆದಿರುವ ’ಡಿ.ವಿ ಗುಂಡಪ್ಪ- ಜೀವನ ಮತ್ತು ಸಾಧನೆ’ , ಖಲೀಲ್ ಗಿಬ್ರಾನ್’ ಮಕ್ಕಳಿಗೆಂದು ಬರೆದಿರುವ ಕೃತಿ, ಮತ್ತು ಕಸ್ತೂರಬಾ ಜೀವನಚರಿತ್ರೆ ಮುಂತಾದ ಪುಸ್ತಕಗಳನ್ನು ಕನ್ನಡ ಸಾಹಿತ್ಯ ಲೋಕಕ್ಕೆ ನೀಡಿದ್ದಾರೆ. ಅವರ ಜೀವನಾಥೆ ಈ ಕೃತಿಯಲ್ಲಿದೆ.
ಬೆ.ಗೋ. ರಮೇಶ್ ಮೈಸೂರು ಜಿಲ್ಲೆಯ ಕೆ.ಆರ್. ನಗರ ತಾಲ್ಲೂಕಿನ ದೊಡ್ಡ ಹನಸಗೆಯಲ್ಲಿ ಆಗಸ್ಟ್ 22 , 1945ರಲ್ಲಿ ಜನಿಸಿದರು. ತಂದೆ ಗೊವಿಂದರಾಜು, ತಾಯಿ ರಾಧಮ್ಮನವರು. ಅವರ ಪ್ರಾರಂಭಿಕ ಶಿಕ್ಷಣ ನಡೆದದ್ದು ಬೆಂಗಳೂರಿನ ಮಲ್ಲೇಶ್ವರಂ ಶಾಲೆಯಲ್ಲಿ. ಇಂಟರ್‌ಮೀಡಿಯೆಟ್ ಓದಿದ್ದು ಸರಕಾರಿ ಕಾಲೇಜಿನಲ್ಲಿ. ಮುಂದೆ ರಮೇಶರು ಹಾಸನದ ಮಲ್ನಾಡ್ ಎಂಜನಿಯರಿಂಗ್ ಕಾಲೇಜಿನಿಂದ ಬಿ.ಇ. ಪದವಿ ಪಡೆದರು. ಹೆಬ್ಬಾಳದ ಕೃಷಿ ವಿಶ್ವವಿದ್ಯಾಲಯದಲ್ಲಿ ಕೆಲಕಾಲ ಉದ್ಯೋಗ ನಿರ್ವಹಿಸಿದ ಬೆ. ಗೋ ರಮೇಶರು ಕರ್ನಾಟಕ ಪವರ್ ಕಾರ್ಪೋರೇಷನ್ನಿನಲ್ಲಿ ಸಹಾಯಕ ಎಂಜನಿಯರಾಗಿ, ಸಹಾಯಕ ಎಕ್ಸುಕ್ಯುಟಿವ್ ಎಂಜನಿಯರಾಗಿ, ಎಕ್ಸಿಕ್ಯುಟಿವ್ ಎಂಜನಿಯರಾಗಿ, ರಾಯಚೂರಿನ ಶಾಕೋತ್ಪನ್ನ ವಿದ್ಯುದಾಗಾರದಲ್ಲಿ ಸೇವೆ ಸಲ್ಲಿಸಿ ...
READ MORE