ನೀರಿಗೆ ಮೂಡಿದ ಆಕಾರ-ಖ್ಯಾತ ವಿಮರ್ಶಕ ಡಾ. ಎಚ್. ಎಸ್. ರಾಘವೇಂದ್ರ ರಾವ್ ಅವರ ವಿಮರ್ಶೆ ಬರಹಗಳ ಕೃತಿ. ಕನ್ನಡದ ಕಥಾಸಾಹಿತ್ಯಕ್ಕೆ ಅನನ್ಯವಾದ ಮೀಮಾಂಸೆಯನ್ನು ರೂಪಿಸುವ ಪ್ರಯತ್ನ ಮಾಡಲಾಗಿದೆ. ಕಥಾಸಾಹಿತ್ಯದ ಹುಟ್ಟು, ಬೆಳವಣಿಗೆ, ಸೈದ್ಧಾಂತಿಕ ನೆಲೆಗಳು ಮತ್ತು ಪ್ರಧಾನ ಲಕ್ಷಣಗಳ ವಿವರವಾದ ಪರಿಚಯವಿದೆ.
ಐವರು ಕತೆಗಾರರು ( ಮಾಸ್ತಿ, ಯು. ಅರ್ ಅನಂತಮೂರ್ತಿ, ಪಿ. ಲಂಕೇಶ್, ಪೂರ್ಣಚಂದ್ರ ತೇಜಸ್ವಿ ಮತ್ತು ವೈದೇಹಿ ) ಮತ್ತು ಐವರು ಕಾದಂಬರಿಕಾರರ (ಕುವೆಂಪು, ಶಿವರಾಮ ಕಾರಂತ, ಯಶವಂತ ಚಿತ್ತಾಲ, ಎಸ್.ಎಲ್. ಭೈರಪ್ಪ ಮತ್ತು ದೇವನೂರ ಮಹಾದೇವ ) ಬರವಣಿಗೆಯ ಅಧ್ಯಯನದ ಮೂಲಕ ಅವರ ಮೀಮಾಂಸೆಯ ಅನನ್ಯತೆಯನ್ನು ಹುಡುಕಲಾಗಿದೆ.
ಮೂಲತಃ ಚಿತ್ರದುರ್ಗದವರಾದ ರಾಘವೇಂದ್ರರಾವ್ ಅವರು (ಜನನ 1948) ಬೆಂಗಳೂರು ನ್ಯಾಷನಲ್ ಕಾಲೇಜಿನಲ್ಲಿ ಕನ್ನಡ ಅಧ್ಯಾಪಕರಾಗಿದ್ದು ನಿವೃತ್ತರಾದವರು. ಕುವೆಂಪು, ಬೇಂದ್ರೆ, ಪು.ತಿ.ನ. ಅವರ ಕಾವ್ಯ ಕುರಿತು ಅಧ್ಯಯನ ನಡೆಸಿ ಡಾಕ್ಟರೇಟ್ ಪದವಿ ಪಡೆದಿರುವ ಅವರು ಕೆಲಕಾಲ ಹಂಪಿಯ ಕನ್ನಡ ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕರಾಗಿದ್ದರು. ಹಂಪಿಯಲ್ಲಿ ಕರ್ನಾಟಕ ವಿಶ್ವಕೋಶದ ಸಂಪಾದಕರಾಗಿದ್ದ ರಾಘವೇಂದ್ರರಾವ್ ಅವರ ವಿಮರ್ಶಾ ಕೃತಿಗಳು ‘ವಿಶ್ಲೇಷಣೆ’, ‘ನಿಲುವು’, ‘ಹುಡುಕಾಟ’, ‘ಪ್ರಗತಿಶೀಲತೆ, ‘ಹಾಡೆ ಹಾದಿಯ ತೋರಿತು’. ‘ಬಾಲ ಮೇಧಾವಿ’ ಎಂಬ ಜರ್ಮನ್ ಕತೆಗಳ ಅನುವಾದ ಸಂಕಲನ ಹಾಗೂ ‘ಜನಗಣಮನ’ ಎಂಬ ಲವಲವಿಕೆಯ ಪ್ರವಾಸ ಕಥನ ಪ್ರಕಟಿಸಿದ್ದಾರೆ. ಕನ್ನಡದ ಪ್ರಮುಖ ವಿಮರ್ಶಕರಲ್ಲಿ ಒಬ್ಬರಾಗಿರುವ ...
READ MORE