ನೀವು ಒಮ್ಮೆ ಫೇಲ್ ಆಗಲೇಬೇಕು ಭಾಗ-2

Author : ಡಿ.ವಿ. ಗುರುಪ್ರಸಾದ್

Pages 136

₹ 130.00




Year of Publication: 2020
Published by: ಸಾಹಿತ್ಯ ಪ್ರಕಾಶನ,
Address: ಕೊಪ್ಪಿಕರ್ ರಸ್ತೆ, ಹುಬ್ಬಳ್ಳಿ-580020
Phone: 9448110034

Synopsys

ವ್ಯಕ್ತಿತ್ವ ವಿಕಸನದ ಪುಟ್ಟ ಹಣತೆ ಎಂಬ ಉಪಶೀರ್ಷಿಕೆಯಡಿ ಲೇಖಕ ಡಿ.ವಿ. ಗುರುಪ್ರಸಾದ್ ಅವರು ಬರೆದ ಪ್ರೇರಣಾತ್ಮಕ ಲೇಖನಗಳ ಭಾಗ-2ರ ಕೃತಿ. ಸ್ವತಃ ಲೇಖಕರು ‘ಜೀವನದಲ್ಲಿ ಯಾವುದಾದರೊಂದು ಸನ್ನಿವೇಶದಲ್ಲಿ ವಿಫಲತೆ ಅನುಭವಿಸಿದಾಗ ಅದನ್ನು ಹೇಗೆ ಎದುರಿಸಬೇಕು ಎಂಬುದರ ಸಿದ್ಧತೆ ಮಾಡಿಕೊಂಡಿರುವುದಿಲ್ಲ. ಈ ಕೊರತೆಯೇ ಅವರನ್ನು ತೊಂದರೆಗೀಡು ಮಾಡುತ್ತದೆ. ಇಂತಹ ಸಿದ್ಧತೆ ಕೈಗೊಳ್ಳಬೇಕು ಎಂದು ಹೇಳುವುದೇ ಈ ಕೃತಿಯ ಉದ್ದೇಶ. ಜೀವನದಲ್ಲಿ ನಡೆಯುವ ಪ್ರತಿಯೊಂದು ಪರೀಕ್ಷೆಯಲ್ಲಿಯೂ ನೂರಕ್ಕೆ ನೂರರಷ್ಟು ಯಶಸ್ಸು ಗಳಿಸುವುದು ಸಾಧ್ಯವಿಲ್ಲ. ಆದರೆ, ಕೆಲವು ಪಾಲಕರು ತಮ್ಮ ಮಕ್ಕಳು ಗಣಿತದಲ್ಲಿ ನೂರಕ್ಕೆ ನೂರು ಅಂಕ ಪಡೆಯಬೇಕು ಎಂದು ಆಶಿಸುತ್ತಾರೆ. ಇದು ಮಕ್ಕಳಲ್ಲಿ ಕೀಳರಿಮೆ ಬೆಳೆಸುತ್ತದೆ. ವೈಫಲ್ಯ ಎನ್ನುವುದು ಒಂದು ಸ್ವಾಭಾವಿಕ ಪ್ರಕ್ರಿಯೆ. ಅದನ್ನು ಹೇಗೆ ಎದುರಿಸಬೇಕು. ಮನಸ್ಸನ್ನು ಹೇಗೆ ಗಟ್ಟಿ ಮಾಡಿಕೊಳ್ಳಬೇಕು. ಸೋಲನ್ನು ಹೇಗೆ ಗೆಲುವನ್ನಾಗಿ ಪರಿವರ್ತಿಸಿಕೊಳ್ಳಬೇಕು’ ಈ ಕುರಿತು ಕೃತಿಯಲ್ಲಿ ಚರ್ಚಿಸಲಾಗಿದೆ ಎಂದು ಹೇಳಿದ್ದಾರೆ.

About the Author

ಡಿ.ವಿ. ಗುರುಪ್ರಸಾದ್

ಲೇಖಕ ಡಿ.ವಿ. ಗುರುಪ್ರಸಾದ್ ಅವರು ನಿವೃತ್ತ ಪೊಲೀಸ್ ಅಧಿಕಾರಿಗಳಾಗಿದ್ದು, ರಾಜ್ಯದ ಪೊಲೀಸ್ ಗುಪ್ತಚರದಳ ಮುಖ್ಯಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ. ತಮ್ಮ ವೃತ್ತಿ ಬದುಕಿನ ಅನುಭವ ಮತ್ತು ತಮ್ಮ ವಿಚಾರಗಳನ್ನು ಕೃತಿಗಳ ಮೂಲಕ ದಾಖಲಿಸುವ ಇವರು ಕ್ರೈಂ ಲೋಕದ ವಿಸ್ಮಯ, ವಿಚಿತ್ರ ಸಂಗತಿಗಳನ್ನು ಓದುಗರಮುಂದಿಡುತ್ತಾ ಬಂದಿದ್ದಾರೆ.  ‘ಪೊಲೀಸ್ ಜೀವನದಲ್ಲಿ ಹಾಸ್ಯ', 'ವೀರಪ್ಪನ್ : ದಂತಚೋರನ ಬೆನ್ನಟ್ಟಿ', 'ಕೈಗೆ ಬಂದ ತುತ್ತು’, ‘ಪೊಲೀಸ್ ಎನ್ ಕೌಂಟರ್’, 'ಕ್ರೈಂ ಕಥೆಗಳು', 'ನೀವು ಒಮ್ಮೆ ಫೇಲ್ ಆಗಲೇಬೇಕು', 'ಅಪರಾಧಗಳ ಆ ಕ್ಷಣ', 'ವಿಶ್ವಪರ್ಯಟನೆ', 'ರಾಜೀವ್ ಗಾಂಧಿ ಭೀಕರ ಹತ್ಯೆ', 'ವೈವಿಧ್ಯತೆಯಲ್ಲಿ ಸಾಮ್ಯತೆ -ಯುರೋಪಿನ ಹದಿನಾಲ್ಕು ದೇಶಗಳು', 'ಗಲ್ಲುಗಂಬದ ...

READ MORE

Related Books