ನೆಲೆಗಾಣದ ಹಕ್ಕಿ ಸಾಮಾಜಿಕ ಕಾದಂಬರಿಯನ್ನು ಲೇಖಕಿ ವೈ.ಕೆ. ಸಂಧ್ಯಾಶರ್ಮ ಅವರು ರಚಿಸಿದ್ದಾರೆ. ಈ ಕೃತಿಯಲ್ಲಿ ದಿನನಿತ್ಯ ಸುತ್ತಮುತ್ತಲ ಬದುಕಿನಲ್ಲಿ ನಡೆಯುವ ಘಟನೆಗಳನ್ನು ಅಂತಃಕರಣವನ್ನು ಕಲುಕುವ ವಿಷಯಗಳನ್ನು ಇಲ್ಲಿ ಪೋಣಿಸಲಾಗಿದೆ. ದಿಗ್ಮೂಢಗೊಳಿಸುವ ವಿಪರ್ಯಾಸಗಳಿವೆ. ಕಣ್ಮರೆಯಾಗಿ ಹೋಗುತ್ತಿರುವ ಅಥವಾ ಕ್ಷೀಣಿಸುತ್ತಿರುವ ಜೀವನ ಮೌಲ್ಯವೆಂದರೆ ಮಾನವೀಯತೆ, ಮನುಷ್ಯ ಮನುಷ್ಯನ ನಡುವಣ ಸಂಬಂಧ, ಅಂತಃಕರನದ ಸ್ನೇಹಪ್ರೇಮಗಳು ಹೀಗೆ ಸಮಾಜದ ಆಗುಹೋಗುಗಳನ್ನೇ ಕಥಾವಸ್ತುವನ್ನಾಗಿಸಿಕೊಂಡು ಲೇಖಕಿ ಈ ಕಾದಂಬರಿಯನ್ನು ಹೆಣೆದಿದ್ದಾರೆ.
ಕಳೆದ 52 ವರ್ಷಗಳಿಂದ ಕನ್ನಡ ಸಾರಸ್ವತಲೋಕದಲ್ಲಿ ಜನಪ್ರಿಯ ಲೇಖಕಿಯಾಗಿ ಖ್ಯಾತಿ ಪಡೆದಿರುವ ವೈ.ಕೆ.ಸಂಧ್ಯಾ ಶರ್ಮ ಅವರು ವೈ.ಕೆ. ಕೇಶವಮೂರ್ತಿ ಮತ್ತು ವೈ.ಕೆ. ಅಂಬಾಬಾಯಿಯವರ ಪುತ್ರಿಯಾಗಿ ಬೆಂಗಳೂರಿನಲ್ಲಿ ಜನಿಸಿದರು. ಪ್ರೌಢಶಾಲೆಯಲ್ಲಿದ್ದಾಗಲೇ ಬರವಣಿಗೆ ಆರಂಭಿಸಿದ ಇವರು, ಬೆಂಗಳೂರಿನ ಕರ್ನಾಟಕ ವಾರ್ತಾ ಇಲಾಖೆಯಲ್ಲಿ ಹಿರಿಯ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು. ಪ್ರಸ್ತುತ ಫ್ರೀಲಾನ್ಸ್ ಜರ್ನಲಿಸ್ಟ್ ಆಗಿ ವಿವಿಧ ಪತ್ರಿಕೆಗಳಲ್ಲಿ ನೃತ್ಯ-ನಾಟಕಗಳ ಕಲಾ ವಿಮರ್ಶಕಿಯಾಗಿ, ಅಂಕಣ ಬರಹಗಾರ್ತಿಯಾಗಿ ಕಾರ್ಯನಿರತರಾಗಿದ್ದಾರೆ. ಪ್ರಜಾಮತ ವಾರಪತ್ರಿಕೆ (1975-76) , ಪ್ರಜಾಪ್ರಭುತ್ವ ವಾರಪತ್ರಿಕೆಗಳಲ್ಲಿ (1977-1980) ಮತ್ತು ಇಂಚರ (1980-82) ಮಾಸಪತ್ರಿಕೆಯಲ್ಲಿ ಸಹಾಯಕ ಸಂಪಾದಕಿಯಾಗಿ ಸೇವೆ ಸಲ್ಲಿಸಿರುವ ಅನುಭವ ಇವರಿಗಿದೆ. ಪ್ರಸ್ತುತ ಅಂತರ್ಜಾಲದ ‘’ ...
READ MORE