ಸಣ್ಣಕತೆ,ಕಾದಂಬರಿ ಹಾಗೂ ವಿಚಾರಪೂರ್ಣ ಲೇಖನಗಳ ಮೂಲಕ ಕನ್ನಡ ಸಾಹಿತ್ಯ ಲೋಕಕ್ಕೆ ಪರಿಚಿತರಾದ ಲೇಖಕಿ ನೇಮಿಚಂದ್ರ.
‘ನೇಮಿಚಂದ್ರರ ಕಥೆಗಳು’ ಒಂದು ಕಥಾ ಸಂಕಲನಗಳ ಗುಚ್ಛವಾಗಿದೆ. ಹಿಂದೆ ಬಿಡಿ ಸಂಕಲನಗಳಾಗಿ ‘ನಮ್ಮ ಕನಸುಗಳಲ್ಲಿ ನೀವಿದ್ದೀರಿ’, ‘ಮತ್ತೆ ಬರೆದ ಕಥೆಗಳು’, ‘ಕಳೆಯ ಬೇಕಿದೆ ನಿನ್ನ ಜೊತೆಯಲಿ ಒಂದು ಶ್ಯಾಮಲ ಸಂಜೆ’ ಇನ್ನೂ ಅನೇಕ ಕಥೆಗಳು ಓದುಗರ ಕೈಸೇರಿವೆ.
ಈ ಕಥಾಸಂಕಲನದ ಅನೇಕ ಕಥೆಗಳು ಹೆಣ್ಣಿನ ಮನಸ್ಥಿತಿ-ಆಶೋತ್ತರಗಳನ್ನು ಹೇಳುವಂತದ್ದು. ಸಮಾನಸ್ತರದ ಬದುಕು ನಡೆಸಲು ಬೇಕಾದ ಕ್ಷಣಗಳಿಗೆ ಅವರ ಕಥೆಗಳು ಸಾಕ್ಷಿಯಾಗುತ್ತವೆ.
ಸ್ತ್ರೀವಾದಿ ಚಿಂತಕಿ, ಸಾಹಿತಿ ನೇಮಿಚಂದ್ರ ಅವರು ಜನಿಸಿದ್ದು 1959 ಜುಲೈ 16ರಂದು ಮೂಲತಃ ಚಿತ್ರದುರ್ಗದವರಾದ ಇವರು ವೃತ್ತಿಯಲ್ಲಿ ಇಂಜಿನಿಯರ್ ಆಗಿದ್ದರು. ಕರ್ನಾಟಕ ಲೇಖಕಿಯರ ಸಂಘದ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಜೀವನುತ್ಸಾಹ ತುಂಬುವಂತಹ ಇವರ ಕೃತಿಗಳೆಂದರೆ ನಮ್ಮ ಕನಸುಗಳಲ್ಲಿ ನೀವಿದ್ದೀರಿ, ಒಂದು ಶ್ಯಾಮಲ ಸಂಜೆ, ನೇಮಿಚಂದ್ರರ ಕಥೆಗಳು, ಸಾವೇ ಬರುವುದಿದ್ದರೆ ನಾಳೆ ಬಾ!, ನನ್ನ ಕಥೆ ನಮ್ಮ ಕಥೆ, ಯಾದ್ ವಶೇಮ್, ಮಹಿಳಾ ಅಧ್ಯಯನ, ದುಡಿವ ಹಾದಿಯಲಿ ಜೊತೆಯಾಗಿ, ಬೆಳಗೆರೆ ಜಾನಕಮ್ಮ ಬದುಕು-ಬರಹ, ಹೋರಾಟದ ಹಾದಿಯಲ್ಲಿ ಧೀಮಂತ ಮಹಿಳೆಯರು, ಬದುಕು ಬದಲಿಸಬಹುದು, ಒಂದು ಕನಸಿನ ಪಯಣ, ಪೆರುವಿನ ಪವಿತ್ರ ಕಣಿವೆಯಲ್ಲಿ, ಸಂತಸ ನನ್ನೆದೆಯ ಹಾಡು ಹಕ್ಕಿ (ಬದುಕು ಬದಲಿಸಬಹುದು ಭಾಗ -4), ಕಾಲುಹಾದಿಯ ಕೋಲ್ಮಿಂಚುಗಳು- ...
READ MORE