'ನೆನಪಿನ ಉಗ್ರಾಣ' ಹರಿಹರದ ಲಲಿತಮ್ಮ ಡಾ. ಚಂದ್ರಶೇಖರ್ ಇವರ ಬದುಕಿನ ಚಿತ್ರಣ ಕಟ್ಟಿಕೊಡುವ ಕೃತಿ. ಕನ್ನಡದ ಖ್ಯಾತ ಲೇಖಕಿ ವೈದೇಹಿ ಅವರು ಈ ಕೃತಿಯನ್ನು ಸಂಪಾದಿಸಿದ್ದಾರೆ. ಹರಿಹರದಲ್ಲಿ ಮಹಿಳಾ ಸಮಾಜದ ಸ್ಥಾಪನೆ ಮಾಡಿ, ಇಪ್ಪತ್ತು ವರ್ಷಗಳ ಸುದೀರ್ಘ ಕಾಲ ಸ್ಕೌಟ್ಸ್ ಗೈಡ್ಸ್ ಕಮಿಷನರ್ ಆಗಿ ಸೇವೆ ಸಲ್ಲಿಸಿ, ನಾಲ್ಕು ಅವಧಿಗೆ ಲಯನ್ಸ್ ಕ್ಲಬ್ ಅಧ್ಯಕ್ಷೆಯಾಗಿ, ಸ್ವಾತಂತ್ರ್ಯ ಹೋರಾಟಗಾರ್ತಿ ಬಿ. ಕಾಮಾಕ್ಷಮ್ಮ ಅವರ ಪುಸ್ತಕವನ್ನು ಅಚ್ಚು ಹಾಕಿಸಿ, ಉಚಿತವಾಗಿ ವಿತರಣೆ ಮಾಡಿದ್ದ ಲೇಖಕಿ ಲಲಿತಮ್ಮ ಡಾ.ಚಂದ್ರಶೇಖರ್ ಅವರು 1995 ರಂದು ಹರಿಹರದಲ್ಲಿ ಪ್ರಗತಿಪರ ಬರಹಗಾರರ ಒಕ್ಕೂಟವನ್ನು ಸ್ಥಾಪಿಸಿದ್ದರು. ಜೀವನ ಚರಿತ್ರೆ, ಭಕ್ತಿಗೀತೆ, ಕಥಾಸಂಕಲನ, ವ್ಯಕ್ತಿ ಚಿತ್ರ ಸೇರಿದಂತೆ ಸಾಹಿತ್ಯದ ಹಲವು ಪ್ರಕಾರಗಳಲ್ಲಿ ಕೃತಿಗಳನ್ನೂ ರಚಿಸಿದ್ದ ಲಲಿತಮ್ಮ ಅವರ ನೆನಪುಗಳನ್ನು ಕೆದಕಿ ವೈದೇಹಿ ಅವರು ಈ ನೆನಪಿನ ಉಗ್ರಾಣವನ್ನು ಸಂಪಾದಿಸಿ ಕನ್ನಡ ಸಾಹಿತ್ಯಲೋಕಕ್ಕೆ ನೀಡಿದ್ದಾರೆ.
ಡಾ. ವೈದೇಹಿ ಅವರ ಮೂಲ ಹೆಸರು ಜಾನಕಿ ಶ್ರೀನಿವಾಸಮೂರ್ತಿ. ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಜನಿಸಿದ ಅವರು ಕಾವ್ಯ, ಪ್ರಬಂಧ, ಮಕ್ಕಳ ಸಾಹಿತ್ಯ, ಜೀವನಚಿತ್ರ, ಕೃತಿ ಸಂಪಾದನೆ ಪ್ರಕಾರದಲ್ಲಿ ಗಣನೀಯ ಸಾಧನೆ ಮಾಡಿದ್ದಾರೆ. ಮಾನವ ಸಹಜ ಸಂಬಂಧಗಳು ಮತ್ತು ಹೆಣ್ಣಿನ ಭಾವತರಂಗಗಳನ್ನು ಹಿಡಿದಿಡುವ ಕಥೆ-ಕಾದಂಬರಿ ರಚಿಸಿರುವ ಲೇಖಕಿ. ಮರಗಿಡಬಳ್ಳಿ ಅಂತರಂಗದ ಪುಟಗಳು ಸಮಾಜಶಾಸ್ತ್ರಜ್ಞೆಯ ಟಿಪ್ಪಣಿಗಳು, ಅಮ್ಮಚ್ಚಿ ಎಂಬ ನೆನಪು. ಕತೆ ಕತೆ ಕಾರಣ (ಕಥಾ ಸಂಕಲನಗಳು), ಅಲೆಗಳಲ್ಲಿ ತರಂಗ (ಸಮಗ್ರ ಕಥಾ ಸಂಕಲನ), ಬಿಂದು ಬಿಂದಿಗೆ, ಪಾರಿಜಾತ ಹೂವ ಕಟ್ಟುವ ಕಾಯಕ (ಕವನ ಸಂಕಲನ), ಅಸ್ಪೃಶ್ಯರು (ಕಾದಂಬರಿ), ಮಲ್ಲಿನಾಥನ ಧ್ಯಾನ, ಮೇಜು ಮತ್ತು ...
READ MORE