ನಿಮ್ಮ ಬದುಕು, ಬುದ್ದಿವಂತಿಕೆ, ನೆನಪಿನ ಶಕ್ತಿ ಪರೀಕ್ಷಾ ನಿರ್ವಹಣೆ ಉತ್ತಮವಾಗಲಿ

Author : ಸಿ.ಆರ್. ಚಂದ್ರಶೇಖರ್

Pages 88

₹ 30.00




Year of Publication: 2008
Published by: ಸಮಾಧಾನ ಆಪ್ತ ಸಲಹಾ ಕೇಂದ್ರ
Address: ಬೆಂಗಳೂರು

Synopsys

ವಿದ್ಯಾರ್ಥಿ ಜೀವನದಲ್ಲಿ ಮುಂದೆ ಬರಲು ವ್ಯಕ್ತಿತ್ವ ವಿಕಸನ ಅತ್ಯಗತ್ಯ. ಶಾಲಾ ದಿನಗಳಲ್ಲಿ ಬುದ್ದಿವಂತಿಕೆ, ನೆನಪಿನ ಶಕ್ತಿಯನ್ನು ಹೇಗೆ ಹೆಚ್ಚಿಸಿಕೊಳ್ಳುತ್ತಾ ಪರೀಕ್ಷೆಯನ್ನು ಎದುರಿಸುವ ಕುರಿತು ಲೇಖಕ ಡಾ. ಸಿ.ಆರ್. ಚಂದ್ರಶೇಖರ ಅವರು ಇಲ್ಲಿ ಚರ್ಚಿಸಿದ್ದಾರೆ. ಪುಟ್ಟ ಪುಟ್ಟ ಕತೆಗಳು ಮಕ್ಕಳನ್ನು ಮನರಂಜಿಸುತ್ತಾ ನೀತಿ ಹೇಳುತ್ತವೆ. ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಬೋಧಕರಿಗೂ ಈ ಕೃತಿ ಉಪಯುಕ್ತ. 

About the Author

ಸಿ.ಆರ್. ಚಂದ್ರಶೇಖರ್
(12 December 1948)

ಡಾ. ಸಿ.ಆರ್. ಚಂದ್ರಶೇಖರ್  ಅಂತಾರಾಷ್ಟ್ರೀಯ ಖ್ಯಾತಿ ಪಡೆದಿರುವ ರಾಷ್ಟ್ರೀಯ ಮನೋರೋಗ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ ಉಪ ಆರೋಗ್ಯ ಅಧೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಮನೋವಿಜ್ಞಾನ ಕ್ಷೇತ್ರದಲ್ಲಿ ಸಾಮಾಜಿಕ ಕಳಕಳಿಯುಳ್ಳ ಹಿರಿಯ ವೈದ್ಯರು ರೋಗಿಗಳ ಶುಶ್ರೂಷೆ,  ಬೋಧನೆ ಮತ್ತು ತರಬೇತಿ ನೀಡುತ್ತಿರುವುದರ ಜೊತೆಗೆ ಕಳೆದ 30 ವರ್ಷಗಳಿಂದ ನಿರಂತರ ಸೇವೆ ಸಲ್ಲಿಸುತ್ತಿದ್ದಾರೆ. 150 ಕ್ಕೂ ಹೆಚ್ಚು ಮನೋವಿಜ್ಞಾನದ ಬಗ್ಗೆ ಕನ್ನಡದಲ್ಲಿ ರಚಿಸಿರುವ ಇವರ ಹಲವು ಪುಸ್ತಕಗಳು ತೆಲುಗು, ಉರ್ದು, ಗುಜರಾತಿ, ಹಿಂದಿ ಭಾಷೆಗಳಿಗೆ ಅನುವಾದಗೊಂಡಿವೆ. 1000 ಕ್ಕೂ ಹೆಚ್ಚು  ಪ್ರೌಢ ಲೇಖನಗಳನ್ನು ಬರೆದಿದ್ದಾರೆ. ...

READ MORE

Related Books