ಲೇಖಕ ಎಚ್.ಎ. ಅನಿಲಕುಮಾರ ಅವರ 1992-98ರ ಅವಧಿಯಲ್ಲಿ ಬರೆದ ಲೇಖನಗಳ ಸಂಗ್ರಹವಿದು. ಕೆಲವು ಇಂಗ್ಲಿಷ್ ಲೇಖನಗಳ ಭಾಷಾಂತರವಿದೆ. ಸಾಮಾನ್ಯ ವಿದ್ಯಮಾನಗಳು, ಘಟನೆಗಳನ್ನು ಸೂಕ್ಷ್ಮದೃಷ್ಟಿಯಿಂದ ನೋಡಿ ಬರೆಹಕ್ಕಿಳಿಸಿದ್ಧೇ ಈ ಕೃತಿಯಾಗಿದೆ.
ಈ ಕೃತಿ ಕುರಿತು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ. ಯು.ಆರ್. ಅನಂತಮೂರ್ತಿ ’ಸಮಕಾಲೀನ ಬದುಕಿನ ಚಿತ್ರಣಕ್ಕೆ ಬಳಕೆಯಾಗಿರುವ ಇಲ್ಲಿಯ ಭಾಷೆ ಹೊಸತಾಗಿದೆ. ಭಿನ್ನವಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿ, ಪ್ರೋತ್ಸಾಹಿಸಿದ್ದಾರೆ.
ಎಚ್.ಎ.ಅನಿಲ್ ಕುಮಾರ್ ಕಲಾ ವಿಮರ್ಶಕರು, ಚಿತ್ರಕಲಾ ಪರಿಷತ್ತಿನ ಕಲಾ ಇತಿಹಾಸ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿರುವ ಇವರು ಕಲೆಗೆ ಸಂಬಂಧಿಸಿದ ಬರಹಗಳ ಮೂಲಕ ಕನ್ನಡ ಮತ್ತು ಇಂಗ್ಲಿಷ್ ಓದುಗರಿಬ್ಬರಿಗೂ ಪರಿಚಿತರು. ಇವರಿಗೆ ದೆಹಲಿ ಕಲಾ ಶಾಲೆ ರಾಷ್ಟ್ರಮಟ್ಟದಲ್ಲಿ ಅತ್ಯುತ್ತಮ ಕಲಾ ಶಿಕ್ಷಕರಿಗೆ ನೀಡುವ ಪ್ರತಿಷ್ಠಿತ ಬಿ.ಸಿ.ಸನ್ಯಾಲ್ ಪ್ರಶಸ್ತಿ ನೀಡಿ ಗೌರವಿಸಿದೆ. ಮೊದಲ ಬಾರಿಗೆ ಕರ್ನಾಟಕದ ಕಲಾ ಶಿಕ್ಷಕರೊಬ್ಬರಿಗೆ ಈ ಪ್ರಶಸ್ತಿ ದೊರೆತಿದೆ. ಶಾಂತಿನಿಕೇತನದ ವಿಶ್ವಭಾರತಿ ವಿಶ್ವವಿದ್ಯಾಲಯದ ಕಲಾ ಇತಿಹಾಸದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಚಿತ್ರಕಲಾ ಪರಿಷತ್ತಿನ ಹಳೆಯ ವಿದ್ಯಾರ್ಥಿಯೂ ಹೌದು. ಲಂಡನ್‌ನ ರಾಯಲ್ ಕಾಲೇಜ್‌ನಲ್ಲಿ ಸಮಕಾಲೀನ ಕ್ಯುರೇಶನ್ ...
READ MORE