ಒಳದನಿ ಪಲುಕುಗಳು- ಕಾತ್ಯಾಯಿನಿ ಕುಂಜಿಬೆಟ್ಟು ಅವರ ವಿಮರ್ಶಾ ಲೇಖನಗಳ ಸಂಕಲನ. ಕೃತಿಯ ಕುರಿತು ನಾ. ದಾಮೋದರ ಶೆಟ್ಟಿ ಅವರು ಬರೆಯುತ್ತಾ ಕಾತ್ಯಾಯಿನಿ ಅವರು ಸೊಗಸಾದ ಕನ್ನಡದಲ್ಲಿ, ಪ್ರಜ್ಞಾಪೂರ್ವಕವಾಗಿ ಬರೆಯುವ ವಿಮರ್ಶೆ ಕರಾವಳಿ ಜಿಲ್ಲೆಗಳ ಸಾಂಸ್ಕೃತಿಕ ಇತಿಹಾಸದ ಭಾಗವಾಗಿ ಉಳಿಯುವುದರಲ್ಲಿ ಯಾವ ಸಂದೇಹವೂ ಇಲ್ಲ. ನಾಟಕವನ್ನಾಗಲೀ ಸಂಗೀತವನ್ನಾಗಲೀ ಆಸ್ವಾದಿಸುವುದಕ್ಕೆ ಬೇಕಾದ ಅನೇಕ ದೃಷ್ಟಿಕೋನಗಳನ್ನು ತೆರೆದಿಡುವ ಕೆಲಸವೂ ಇಲ್ಲಿ ನಡೆದಿದೆ ಎನ್ನುತ್ತಾರೆ.
ಡಾ. ಕಾತ್ಯಾಯಿನಿ ಕುಂಜಿಬೆಟ್ಟು ಅವರ ಹುಟ್ಟೂರು ಉಡುಪಿಯ ಕಾಪು ಬಳಿಯ ಕರಂದಾಡಿ, ಕನ್ನಡದಲ್ಲಿ ಸ್ನಾತಕೋತ್ತರ ಪದವಿ, ಮುಂಬೈ ಅಖಿಲ ಭಾರತ ಗಂಧರ್ವ ಮಹಾವಿದ್ಯಾಲಯದಿಂದ ಹಿಂದೂಸ್ಥಾನಿ ಶಾಸ್ತ್ರೀಯ ಸಂಗೀತ “ವಿಶಾರದ' ಪದವಿ. ತುಳು ಕಾದಂಬರಿ 'ಕಬರ್ಗತ್ತಲೆ'ಗೆ ತುಳುಕೂಟ(ರಿ) ಉಡುಪಿಯ 'ಪಣಿಯಾಡಿ ಪ್ರಶಸ್ತಿ’, ಕನ್ನಡ ಕಾದಂಬರಿ 'ತೊಗಲುಗೊಂಬೆ'ಗೆ ಬೆಂಗಳೂರು ಕನ್ನಡ ಸಾಹಿತ್ಯ ಪರಿಷತ್ತಿನ 'ಮಲ್ಲಿಕಾ' ಪ್ರಶಸ್ತಿ ಹಾಗೂ ಮೂಡಬಿದರೆಯ ವರ್ಧಮಾನ ಪ್ರತಿಷ್ಠಾನದ 'ಯುವ ವರ್ಧಮಾನ ಪ್ರಶಸ್ತಿ'; 'ಒಳದನಿಯ ಪಲುಕುಗಳು' ವಿಮರ್ಶಾಕೃತಿಗೆ ಕ.ಸಾ.ಪ. ಲೀಲಾವತಿ ಗುರುಸಿದ್ದಪ್ಪ ಸಿಂಧೂರ ದತ್ತಿ ಪ್ರಶಸ್ತಿ, ಡಾ. ದ. ರಾ. ಬೇಂದ್ರೆ ರಾಷ್ಟ್ರೀಯ ಸ್ಮಾರಕ ಟ್ರಸ್ಟಿನ ದ.ರಾ.ಬೇಂದ್ರೆ ...
READ MORE