ಭಾರತೀಯ ಸಾಂಸ್ಕೃತಿಕ ಇತಿಹಾಸದಲ್ಲಿ ಸಾಮಾಜಿಕ ನ್ಯಾಯ, ಸೋದರಭಾವಗಳಿಗಾಗಿ ಸಾಮಾಜಿಕ ಚಳವಳಿಯನ್ನು ಭಿನ್ನ ಕಾಲಘಟ್ಟಗಳಲ್ಲಿ ತಮ್ಮದೇ ಆದ ರೀತಿಯಲ್ಲಿ ಕೈಗೊಂಡು ಜನಮನದ ಅಂತರಾಳಕ್ಕೆ ಇಳಿದ ಮೂವರು ಮಹಾ ಮೇಧಾವಿಗಳ ಚಿಂತನೆಗಳ ಕುರಿತು ವಿವರಿಸಿರುವ ಕೃತಿ-ಒಂದು ಕೊಡ ಹಾಲಿನ ಸಮರ. ಈ ಕೃತಿಯು ಮುಖ್ಯವಾಗಿ ಬುದ್ಧ, ಬಸವಣ್ಣ ಹಾಗೂ ಅಂಬೇಡ್ಕರ್ ಚಿಂತನೆಗಳನ್ನು ಲೇಖಕ ಮೂಡ್ನಾಕೂಡು ಚಿನ್ನಾಸ್ವಾಮಿ ಅವರು ಅವಲೋಕಿಸಿದ್ದಾರೆ.
ದಲಿತ-ಬಂಡಾಯ ಸಾಹಿತ್ಯ ಚಳವಳಿಯ ಸತ್ವಪೂರ್ಣ ದನಿಯಾಗಿರುವ ಕವಿ ಡಾ. ಮೂಡ್ನಾಕೂಡು ಚಿನ್ನಸ್ವಾಮಿ ಮೂಲತಃ ಗಡಿನಾಡಾದ ಚಾಮರಾಜನಗರದವರು. ಎಂ.ಕಾಂ. ಎಂ.ಎ(ಕನ್ನಡ), ಡಿ.ಲಿಟ್. ಪದವೀಧರರಾದ ಅವರು ರಾಜ್ಯ ರಸ್ತೆ ಸಾರಿಗೆ ನಿಗಮಗಳಲ್ಲಿ ಹಿರಿಯ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದಾರಲ್ಲದೆ, ನಿರ್ದೇಶಕರು(ಹಣಕಾಸು) ಹಾಗೂ ಆರ್ಥಿಕ ಸಲಹೆಗಾರರಾಗಿ ಕಾರ್ಯನಿರ್ವಹಿಸಿ ಮಾರ್ಚ್ 2012ರಲ್ಲಿ ನಿವೃತ್ತಿ ಹೊಂದಿದ್ದಾರೆ. ಜೊತೆಗೆ ಏಪ್ರಿಲ್ 2015 ರಿಂದ ಮಾರ್ಚ್ 2017 ರವರೆಗೆ ಸಮಾಜ ಕಲ್ಯಾಣ ಇಲಾಖೆಯ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಲ್ಲಿ ಆರ್ಥಿಕ ಸಲಹೆಗಾರರಾಗಿ ಸೇವೆ ಸಲ್ಲಿಸಿದ್ದಾರೆ. 2016-17 ರ ಸಾಲಿಗೆ ಮೈಸೂರು ವಿಶ್ವವಿದ್ಯಾಲಯದ ಡಾ. ಬಿ.ಆರ್. ಅಂಬೇಡ್ಕರ್ ಸಂಶೋಧನಾ ...
READ MORE