ಬೆಂಗಳೂರಿನ ಸೆಂಟ್ರಲ್ ಕಾಲೇಜು ವಿದ್ಯಾರ್ಥಿಗಳು ಕರ್ಣಾಟಕ ಸಂಘದ ಸದಸ್ಯರು. ಇವರ ಬರೆದ ಲೇಖನಗಳನ್ನು ಸಂಗ್ರಹಿಸಿದ್ದೇ -ಪಚ್ಚೆಯ ತೆನೆ. ಜೆ.ಪಿ. ರಾಜರತ್ನಂ ಅವರು ಸಂಪಾದಿಸಿದ್ದು, ಕನ್ನಡಿಯ ಮುಂದೆ, ಒಂದು ಕೆಟ್ಟ ಕನಸು, ನಾನು ತಿಂದಿರುವ ಹಣ್ಣುಗಳು ಸೇರಿದಂತೆ ಒಟ್ಟು 10 ಲೇಖನಗಳನ್ನು ಸಂಕಲಿಸಲಾಗಿದೆ. ಇಲ್ಲಿಯ ಲೇಖನಗಳು-ಪ್ರಬಂಧಗಳು ವಸ್ತು ವೈವಿಧ್ಯತೆಯಿಂದ ಕಂಗೊಳಿಸುತ್ತವೆ.
ಆಡುಮಾತಿನ ಪದಗಳ ಬಳಕೆಯ ‘ರತ್ನನ ಪದಗಳು’ ಮೂಲಕ ಜನಪ್ರಿಯರಾಗಿದ್ದ ಜಿ.ಪಿ. ರಾಜರತ್ನಂ ಅವರು ಕನ್ನಡ ಸಾಹಿತ್ಯದ ಪರಿಚಾರಿಕೆಗೂ ಹೆಸರಾಗಿದ್ದರು. ರಾಜರತ್ನಂ ಅವರು ಜನಿಸಿದ್ದು ಬೆಂಗಳೂರು ಜಿಲ್ಲೆಯ ರಾಮನಗರದಲ್ಲಿ 1908ರ ಡಿಸೆಂಬರ್ 8 ರಂದು. ತಂದೆ ಜೆ.ಪಿ. ಗೋಪಾಲಕೃಷ್ಣಯ್ಯಂಗಾರ್. ರಾಜರತ್ನಂ ಅವರು ಮೈಸೂರಿನಲ್ಲಿ ಪ್ರೌಢಶಾಲಾ ಶಿಕ್ಷಣ ಮುಗಿಸಿ, ಸೆಂಟ್ರಲ್ ಕಾಲೇಜಿನಲ್ಲಿ ಬಿ.ಎ. ಮತ್ತು ಮೈಸೂರು ಮಹಾರಾಜ ಕಾಲೇಜಿನಲ್ಲಿ ಎಂ.ಎ. ಪದವಿ ಗಳಿಸಿದರು. ಅನಂತರ ಮೈಸೂರು, ತುಮಕೂರು, ಶಿವಮೊಗ್ಗ, ಬೆಂಗಳೂರು ಕಾಲೇಜುಗಳಲ್ಲಿ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದ ಅವರು 1964ರಲ್ಲಿ ನಿವೃತ್ತರಾದ ಮೇಲೆ ಯುಜಿಸಿ ಉಪಾಧ್ಯಾಯರಾಗಿ ಕೆಲವು ಕಾಲ ಸೇವೆ ಸಲ್ಲಿಸಿದರು. ಕವಿ, ...
READ MORE