ಪ್ರಕೃತಿ ಪ್ರಧಾನವಾದ ಕವಿತೆಗಳಿರುವ ಸಂಕಲನ ’ಪಕ್ಷಿಕಾಶಿ,’. ಈ ಸಂಕಲನದಲ್ಲಿ 47 ಕವನಗಳಿವೆ. ಮೊದಲ ಮುದ್ರಣ 1946.
ಕುವೆಂಪು ಎಂಬ ಕಾವ್ಯನಾಮದಿಂದ ಸಾಹಿತ್ಯ ರಚನೆ ಮಾಡಿದ ಕವಿ, ಪ್ರಖರ ವಿಚಾರವಾದಿ-ಚಿಂತಕ ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ ಅವರು ಕನ್ನಡ ಸಾಹಿತ್ಯದ ಮೇರೆಗಳನ್ನು ವಿಸ್ತರಿಸಿದವರು. ತಂದೆ ವೆಂಕಟಪ್ಪಗೌಡ ತಾಯಿ ಸೀತಮ್ಮ. ತೀರ್ಥಹಳ್ಳಿ ತಾಲ್ಲೂಕಿನ ಕುಪ್ಪಳ್ಳಿಯವರಾದ ಪುಟ್ಟಪ್ಪ ಜನಿಸಿದ್ದು ಚಿಕ್ಕಮಗಳೂರು ಜಿಲ್ಲೆಯ ಹಿರೇಕೂಡಿಗೆಯಲ್ಲಿ 1904ರ ಡಿಸೆಂಬರ್ 29ರಂದು. ಮನೆಯಲ್ಲೇ ಖಾಸಗಿ ಮೇಷ್ಟರ ಮೂಲಕ ಪ್ರಾರಂಭಿಕ ವಿದ್ಯಾಭ್ಯಾಸದ ನಂತರ ತೀರ್ಥಹಳ್ಳಿಯಲ್ಲಿ ವಿದ್ಯಾಭ್ಯಾಸ ಮುಗಿಸಿ ಮೈಸೂರಿನಲ್ಲಿ ವೆಸ್ಲಿಯನ್ ಮಿಷನ್ ಹೈಸ್ಕೂಲ್, ಮಹಾರಾಜ ಕಾಲೇಜುಗಳಲ್ಲಿ ಓದಿ ಎಂ.ಎ. ಪದವಿ (1929) ಪಡೆದರು. ಮೈಸೂರು ಮಹಾರಾಜ ಕಾಲೇಜಿನಲ್ಲಿ ಅಧ್ಯಾಪಕ (1929) ಆಗಿ ಅನಂತರ ಕ್ರಮೇಣ ಉಪಪ್ರಾಧ್ಯಾಪಕ, ...
READ MORE