1995ರಲ್ಲಿ ಕಲಬುರ್ಗಿ ಅವರಿಗೆ ಪಂಪ ಪ್ರಶಸ್ತಿ ದೊರೆತ ಸಂದರ್ಭದಲ್ಲಿ ಮೂಡಿ ಬಂದ ಕೃತಿ ಇದು. ಡಾ. ಜಿ.ವಿ.ಕುಲಕರ್ಣಿ ಕೃತಿಯ ಸಂಪಾದಕರು. ಕಲಬುರ್ಗಿ ಅವರ ಬದುಕು- ಬರಹ ಕುರಿತ ಸಂಕ್ಷಿಪ್ತ ಪರಿಚಯ ಇದರಲ್ಲಿದೆ.
ಮೂಲತಃ ವಿಜಯಪುರ ಜಿಲ್ಲೆಯ ಡೊಮನಾಳ ಗ್ರಾಮದವರಾದ ಡಾ. ಜಿ.ವಿ.ಕುಲಕರ್ಣಿ ಕವಿ, ನಾಟಕಕಾರ, ವಿಮರ್ಶಕ. ’ಜೀವಿ’ ಎಂಬ ಕಾವ್ಯ ನಾಮದಿಂದ ಬರೆಯುವ ಅವರು ಶಾಲಾ-ಕಾಲೇಜಿನ ದಿನಗಳಿಂದಲೂ 'ಮೆರಿಟ್ ಸ್ಕಾಲರ್ಶಿಪ್' ಪಡೆಯುತ್ತಿದ್ದ ವಿದ್ಯಾರ್ಥಿ. 'ಫೆಲೋಶಿಪ್' ಪಡೆದೇ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ (ಎಂ.ಎ) ಕನ್ನಡ ಹಾಗೂ ಸಂಸ್ಕೃತ ಬಿ.ಎ. ಪದವಿಗಳನ್ನು ಗಳಿಸಿದರು. ನಂತರ, ಕರ್ನಾಟಕ ವಿಶ್ವವಿದ್ಯಾಲಯದಿಂದ ಎಲ್.ಎಲ್.ಬಿ ಪದವಿ ಪೂರ್ಣಗೊಳಿಸಿ ಮುಂಬೈಗೆ ತೆರಳಿದರು. ಮುಂಬಯಿ ವಿಶ್ವವಿದ್ಯಾಲಯದಿಂದ ಆಂಗ್ಲ ಭಾಷೆಯಲ್ಲಿ ಎಂ.ಎ, ಪಿಎಚ್.ಡಿ ಪಡೆದರು. ಬೊಂಬಾಯಿ ನಗರದ ಖಾಲ್ಸಾ ಮತ್ತು ಡಹಣೂಕರ್ ಚೀನಾಯ್ ಕಾಲೇಜುಗಳಲ್ಲಿ ಕನ್ನಡ-ಇಂಗ್ಲೀಷ್ ಪ್ರಾಧ್ಯಾಪಕರಾಗಿ ಕೆಲಸ ಮಾಡಿದ ...
READ MORE