ಎಸ್.ಎಲ್. ಭೈರಪ್ಪ ಸೇರಿದಂತೆ ಅನೇಕ ಪ್ರಸಿದ್ಧ ವ್ಯಕ್ತಿಗಳ ಚಿತ್ರಣವನ್ನು ಅಕ್ಷರ ರೂಪದಲ್ಲಿ ಬಿತ್ತರಿಸಿದ ಕೃತಿ ಶತಾವಧಾನಿ ಆರ್. ಗಣೇಶ್ ಅವರ ‘ಪಂಕ್ತಿಪಾವನರು ವ್ಯಕ್ತಿಚಿತ್ರಗಳು’. ಭಾರತದ ಶ್ರೀಮಂತ ಕಲೆಗಳಾದ ಯಕ್ಷಗಾನ, ಭರತನಾಟ್ಯಗಳಲ್ಲಿ ಹೆಸರು ಮಾಡಿದವರ ಕುರಿತ ಬರಹಗಳು ಇಲ್ಲಿವೆ. ಅಷ್ಟೇಅಲ್ಲದೆ ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿ, ಮಹತ್ತರವಾದ ಕೊಡುಗೆಗಳನ್ನು ನೀಡಿದ ಹಲವಾರು ವ್ಯಕ್ತಿಗಳ ಚಿತ್ರಣವನ್ನು ಕೃತಿಯಲ್ಲಿ ಕಾಣಬಹುದಾಗಿದೆ.
ಶತಾವಧಾನಿ ಗಣೇಶ ಅವರು ಉತ್ತಮ ವಾಗ್ಮಿಗಳು. ವಿದ್ವಾಂಸರು. ಅವಧಾನ ಕಲೆಯನ್ನು ರೂಢಿಸಿಕೊಂಡವರು. “ಕನ್ನಡದಲ್ಲಿ ಅವಧಾನ ಕಲೆ” ಎಂಬ ಮಹಾಪ್ರಬಂಧಕ್ಕೆ ಹಂಪಿಯ ಕನ್ನಡ ವಿಶ್ವವಿದ್ಯಾನಿಲಯ ಪ್ರಪ್ರಥಮ ಡಿ.ಲಿಟ್. ಪದವಿ ನೀಡಿ ಗೌರವಿಸಿದೆ. ಪ್ರಸ್ತುತ ಭಾರತೀಯ ವಿದ್ಯಾಭವನದ ಬೆಂಗಳೂರು ಶಾಖೆಯ ಸಂಸ್ಕೃತ ವಿಭಾಗದ ನಿರ್ದೇಶಕರಾಗಿದ್ದಾರೆ. ಆರ್.ಶಂಕರನಾರಾಯಣ ಅಯ್ಯರ್ ಹಾಗೂ ಅಲಮೇಲಮ್ಮ ದಂಪತಿಯ ಪುತ್ರರು.04-12-1962ರಂದು ಕೋಲಾರದಲ್ಲಿ ಜನನ. ಬೆಂಗಳೂರಿನ ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯ (UVCE), ದಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಪದವೀಧರರು. ಬೆಂಗಳೂರಿನ ಇಂಡಿಯನ್ ಇನ್ಸ್ಟಿ ಟ್ಯೂಟ್ ಆಫ್ ಸೈನ್ಸ್ ನಲ್ಲಿ ಮೆಟೀರಿಯಲ್ ಸೈನ್ಸ್ ಹಾಗೂ ಮೆಟಲರ್ಜಿಯಲ್ಲಿ ಎಂ.ಎಸ್ಸಿ. ಪದವೀಧರರು. ಮೈಸೂರ್ ವಿಶ್ವವಿದ್ಯಾಲಯದ ಅಡಿಯಲ್ಲಿ ...
READ MORE