ಈ ಕೃತಿಯಲ್ಲಿ ಗಾಂಧೀಜಿ, ಮಹದೇವ ದೇಸಾಯಿ, ಕಸ್ತೂರಬಾ, ಜಿನ್ನಾ, ನೆಹರೂ ಹೀಗೆ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾದ ಎಲ್ಲ ವ್ಯಕ್ತಿಚೇತನಗಳ ಬಗ್ಗೆ ವಿವರಿಸಲಾಗಿದೆ. ಗಾಂಧಿ ಕಂಡ ನಿಜವಾದ ರಾಮರಾಜ್ಯ ಒಳಗೊಳ್ಳುವ ಭಾರತದ ಕನಸನ್ನು ಮಕ್ಕಳಿಗೆ ಬಿತ್ತುವುದೇ ಈ ಕೃತಿಯ ಮುಖ್ಯ ಉದ್ದೇಶವಾಗಿದೆ. ಸ್ವಾತಂತ್ರ್ಯ ಹೋರಾಟದ ಹಿಂದಿನ ಸಾಮಾಜಿಕ ಬದುಕಿನ ಅರಿವನ್ನು ಮಕ್ಕಳ ಮನಸ್ಸಿಗೆ ಮನೋಜ್ಞವಾಗಿ ಮಾಡಿಕೊಡಲಾಗಿದೆ. ಪ್ರಸ್ತುತ ಭಾರತ ಎದುರಿಸುತ್ತಿರುವ ಹಲವು ಬಗೆಯ ಸಾಮಾಜಿಕ, ರಾಜಕೀಯ ಸಮಸ್ಯೆಗಳ ಕುರಿತ ಮಾಹಿತಿಯನ್ನು ಲೇಖಕರಾದ ಬೊಳುವಾರು ಮಹಮದ್ ಕುಂಞಿ ಯವರು ಈ ಕೃತಿಯಲ್ಲಿ ವಿವರಿಸಿದ್ದಾರೆ.
ಕನ್ನಡದ ವಿಶಿಷ್ಟ ಕತೆಗಾರ ಬೊಳುವಾರು ಮಹಮದ್ ಕುಂಞ್ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನವರು. ‘ಅತ್ತ, ಇತ್ತಗಳ ಸುತ್ತಮುತ್ತ’. ದೇವರುಗಳ ರಾಜ್ಯದಲ್ಲಿ, ಅಂಕ, ಆಕಾಶಕ್ಕೆ ನೀಲಿ ಪರದೆ, ಒಂದು ತುಂಡು ಗೋಡೆ, ಅವರ ಕಥಾಸಂಗ್ರಹಗಳು. ತಟ್ಟು ಚಪ್ಪಾಳೆ ಪುಟ್ಟ ಮಗು ಅವರು ಸಂಪಾದಿಸಿದ ಮಕ್ಕಳ ಪದ್ಯಗಳ ಸಂಕಲನ. ಜಿಹಾದ್, ಸ್ವಾತಂತ್ರ್ಯದ ಓಟ, ಓದಿರಿ ಅವರ ಕಾದಂಬರಿಗಳು. ಬ್ಯಾಂಕ್ ಉದ್ಯೋಗಿಯಾಗಿ ನಾಲ್ಕು ದಶಕ ಕೆಲಸ ಮಾಡಿ ನಿವೃತ್ತರಾಗಿರುವ ಬೊಳುವಾರರು ಪ್ರಸ್ತುತ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಕನ್ನಡ ಗದ್ಯ ಸಾಹಿತ್ಯಕ್ಕೆ ಮುಸ್ಲಿಂ ಬದುಕನ್ನು ಮೊತ್ತ ಮೊದಲು ಪರಿಚಯಿಸಿದ ಇವರು, ಕನ್ನಡ ಸಾಹಿತ್ಯದಲ್ಲಿ ಮುಸ್ಲಿಂ ಸಂವೇದನೆ ಎಂಬ ...
READ MORE