ಪರಿವರ್ತನೆಯ ಸುಳಿಯಲ್ಲಿ ಕಿರು ಸಮುದಾಯಗಳು

Author : ಎನ್.ಪಿ. ಶಂಕರನಾರಾಯಣ ರಾವ್

Pages 224

₹ 50.00




Published by: ಕನ್ನಡ ಸಾಹಿತ್ಯ ಪರಿಷತ್ತು ಬೆಂಗಳೂರು
Address: ಪಂಪ ಮಹಾಕವಿ ರಸ್ತೆ, ಚಾಮರಾಜಪೇಟೆ, ಬೆಂಗಳೂರು 560018\n
Phone: 080- 26612991 / 26623584

Synopsys

'ಪರಿವರ್ತನೆಯ ಸುಳಿಯಲ್ಲಿ ಕಿರು ಸಮುದಾಯಗಳು’ ಎನ್‌.ಪಿ. ಶಂಕರನಾರಾಯಣ ಅವರ ಕೃತಿಯಾಗಿದೆ. ಗ್ರಾಮಗಳ ಕಿರುಸಮುದಾಯಗಳತ್ತ ಕಣ್ಣು ಹಾಯಿಸಿ ಅವರ ಆಚಾರ-ವಿಚಾರ- ಜೀವನ ಕ್ರಮಗಳ ವಿವರವನ್ನೇ ನಮ್ಮ ಮುಂದಿರಿಸಿದ್ದಾರೆ. ಕಾಡು ಮೇಡು ಅಲೆಯುತ್ತ ನೈಸರ್ಗಿಕ ಉತ್ಪನ್ನಗಳನ್ನೇ ನಂಬಿ ಬಾಳಿದ್ದ ಈ ಸಮುದಾಯಗಳು ಈಗ ಆಧುನಿಕತೆಯ ಹಾವಳಿಯಿಂದ ಪರಿವರ್ತನೆಯ ದಾರಿ ತುಳಿಯಲೇಬೇಕಾಗಿದೆ.

About the Author

ಎನ್.ಪಿ. ಶಂಕರನಾರಾಯಣ ರಾವ್
(03 August 1928 - 28 November 2006)

.ಎನ್.ಪಿ. ಶಂಕರ ನಾರಾಯಣ ರಾವ್ ಅವರು 1928ರ ಆಗಸ್ಟ್ 03ರಂದು ಹಾಸನ ಜಿಲ್ಲೆಯ ನಿಟ್ಟೂರು ಗ್ರಾಮದವರು. ತಂದೆ ಪಟ್ಟಾಭಿರಾಮಯ್ಯ ಹಾಗೂ ತಾಯಿ ಅಚ್ಚಮ್ಮ. ತಂದೆ ಸಬ್ ರಿಜಿಸ್ಟ್ರಾರ್ ಇದ್ದರು. ವರ್ಗಾವಣೆ ಆದ ಕಡೆ ಇವರ ವಿದ್ಯಾಭ್ಯಾಸ ಅನಿವಾರ್ಯವಾಯಿತು. ಬೆಂಗಳೂರಿನ ಶ್ರೀರಾಮಪುರದಲ್ಲಿ ಪ್ರಾಥಮಿಕ ಶಿಕ್ಷಂ, ಕನಕಪುರದ ಕಾನಕಾನಹಳ್ಳಿ, ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಆನೇಕಲ್ ಹಾಗೂ ಬಸವನಹಳ್ಳಿಯಲ್ಲಿ ಮಾಧ್ಯಮಿಕ ಹಾಗೂ ಮೈಸೂರಿನಲ್ಲಿ ಪ್ರೌಢ ಶಿಕ್ಷಣ ಪೂರೈಸಿದರು. ಆ ಕಾಲದಲ್ಲಿ ಸ್ವಾತಂತ್ಯ್ರ ಚಳವಳಿ ಆರಂಭವಾಗಿ, ಜೈಲುವಾಸ ಅನುಭವಿಸಿದರು. ಮೈಸೂರು ಸ್ಟೂಡೆಂಟ್ಸ್ ಯೂನಿಯನ್ ಸ್ಥಾಪಿಸಿ ಎಡ ಪಂಥೀಯ ವಿಚಾರಗಳೊಂದಿಗೆ ಹೋರಾಟ ನಡೆಸಿದರು. ಮೈಸೂರು ಪುರಸಭಾ ಕಾರ್ಮಿಕ ಸಂಘದ ...

READ MORE

Related Books