ಲೇಖಕರು ಪಶ್ಚಿಮ ಮುಖಿಯಾಗಿ ಹೊರಟು ಯೂರೋಪಿನ ಪೋರ್ಚುಗಲ್, ಸ್ಪೇನ್, ಫ್ರಾನ್ಸ್ ಹಾಗೂ ಇಟಲಿ ದೇಶಗಳಲ್ಲಿ ಪ್ರವಾಸ ಮಾಡುವಾಗ ತಾವು ಬೆರಗಿನಿಂದ ಕಂಡ ಹಲವು ನಗರ-ನದಿ-ಬೆಟ್ಟಗಳನ್ನು, ಜನರನ್ನು, ಸಾವಿರಾರು ವರ್ಷಗಳ ಹಿಂದೆ ಸ್ಫೋಟಗೊಂಡ ವೆಸೂವಿಯಸ್ ಅಗ್ನಿಪರ್ವತವನ್ನು, ಆಕಾಶದತ್ತ ಹರಡಿದ ಬೂದಿ ಪಾಂಪೆ ನಗರವನ್ನು ಆವರಿಸಿದ ಪರಿ ಹೀಗೆ ಅನೇಕ ಪರಿಸರ ವಿಜ್ಞಾನಕ್ಕೆ ಸಂಬಂಧಿಸಿದ ಹಲವು ಕುತೂಹಲ ವಿಚಾರಗಳನ್ನು ಲೇಖಕರು ಪರಿಚಯ ಮಾಡಿದ್ದಾರೆ. 2008ರಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿ ನೀಡುವ ‘ಗೌರವ ಪ್ರಶಸ್ತಿ’ಯನ್ನು ತನ್ನದಾಗಿಸಿಕೊಂಡ ಕೃತಿ ಇದಾಗಿದೆ.
ಭೂ ವಿಜ್ಞಾನಿ, ಸಂಶೋಧಕ, ಅಂಕಣಕಾರ, ವಿಜ್ಞಾನ ಲೇಖಕ ಟಿ.ಆರ್. ಅನಂತರಾಮು ಅವರು ಜನಿಸಿದ್ದು 1949 ಆಗಸ್ಟ್ 3ರಂದು ತುಮಕೂರು ಜಿಲ್ಲೆ ಶಿರಾ ತಾಲ್ಲೂಕಿನ ತಾಳಗುಂದದಲ್ಲಿ.ತಾಳಗುಂದ ರಾಮಣ್ಣ ಅನಂತರಾಮು ಅವರ ಪೂರ್ಣ ಹೆಸರು. ಸಿರಾದ ಸರ್ಕಾರಿ ಮಾಧ್ಯಮಿಕ ಶಾಲೆಯಲ್ಲಿ ಮಾಧ್ಯಮಿಕ ಶಿಕ್ಷಣ ಪೂರ್ಣಗೊಳಿಸಿದ ಅವರು ಸಿರಾದ ಮುನಿಸಿಪಲ್ ಹೈಸ್ಕೂಲಿನಲ್ಲಿ ಪ್ರೌಢಶಿಕ್ಷಣ ಪೂರ್ಣಗೊಳಿಸಿದ್ದಾರೆ. ಆನಂತರ ತುಮಕೂರಿನ ಸರ್ಕಾರಿ ಕಾಲೇಜಿನಲ್ಲಿ ಪದವಿ, ಮೈಸೂರು ವಿಶ್ವವಿದ್ಯಾಲಯದಲ್ಲಿ ಎಂ.ಎನ್ಸಿ(ಜಿಯಾಲಜಿ) ಪದವಿ ಪಡೆದಿದ್ದಾರೆ. ಭೂ ವಿಜ್ಞಾನ ವಿಷಯದಲ್ಲಿ ಪದವಿ ಪಡೆದ ನಂತನ ಬೆಂಗಳೂರಿನ ಸರ್ಕಾರಿ ವಿಜ್ಞಾನ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ, ರಾಜ್ಯದ ನಾನಾ ಕಾಲೇಜುಗಳಲ್ಲಿ ಅಧ್ಯಾಪಕರಾಗಿ ಕೆಲಸ ಮಾಡಿದ್ದಾರೆ. ...
READ MOREಕರ್ನಾಟಕ ಸಾಹಿತ್ಯ ಅಕಾಡೆಮಿ ಪುಸ್ತಕ ಬಹುಮಾನ 2008