ಎಮ್.ಜೆ.ಸುಂದರ್ ರಾಮ್ ಅವರ ‘ಪೆಪ್ಟಿಕ್ ಅಲ್ಸರ್ ಹೊಸ ಬೆಳಕು’ ಕೃತಿಯು ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಪ್ರಕಟಿಸಿದ ಕೃತಿಯಾಗಿದೆ. ಈ ಕೃತಿಗೆ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಅಧ್ಯಕ್ಷರಾದ ಎಚ್. ಎಸ್. ನಿರಂಜನ ಆರಾಧ್ಯ ಮುನ್ನುಡಿ ಬರೆದಿದ್ದಾರೆ. ‘ನಮ್ಮ ರಾಜ್ಯದ ಜನರಲ್ಲಿ ವಿಜ್ಞಾನವನ್ನು ಪ್ರಚಾರ ಮಾಡಿ ವೈಜ್ಞಾನಿಕ ಮನೋಭಾವದ ಬೆಳವಣಿಗೆಗೆ ಉತ್ತೇಜನ ನೀಡುವುದು ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಮುಖ್ಯ ಧೈಯ, ರಾಜ್ಯದ ವಿವಿಧ ಸ್ಥಳಗಳಲ್ಲಿ ಸ್ವಯಂ ಪ್ರೇರಣೆಯಿಂದ ರೂಪುಗೊಂಡಿರುವ ಪರಿಷತ್ತಿನ ಘಟಕಗಳು ಸ್ಥಳೀಯವಾಗಿ ಈ ಕೆಲಸದಲ್ಲಿ ನಿರತವಾಗಿವೆ. ಉಪನ್ಯಾಸಗಳು, ವಿಚಾರ ಸಂಕಿರಣಗಳು, ವೈಜ್ಞಾನಿಕ ಪ್ರದರ್ಶನಗಳು ಮುಂತಾದುವನ್ನು ಏರ್ಪಡಿಸುವ ಮೂಲಕವು ದಿನನಿತ್ಯದ ಸಮಸ್ಯೆಗಳಿಗೆ ವೈಜ್ಞಾನಿಕ ಪರಿಹಾರಗಳನ್ನು ಹುಡುಕುವಲ್ಲಿ ಜನತೆಗೆ ನೆರವು ನೀಡುವ ಮೂಲಕವೂ ಪರಿಷತ್ತಿನ ಧೈಯಗಳನ್ನು ಸಫಲಗೊಳಿಸುವ ಪ್ರಯತ್ನ ನಡೆದಿದೆ. ಪರಿಷತ್ತು ಪ್ರಕಟಿಸುವ ನಿಯತಕಾಲಿಕೆಗಳೂ ಕಿರುಹೊತ್ತಿಗೆಗಳೂ ಆ ಪ್ರಯತ್ನಕ್ಕೆ ಬೆಂಬಲ ನೀಡುತ್ತಲಿವೆ. ಈಗಾಗಲೇ ಮೂವತ್ತನೇ ವರ್ಷಕ್ಕೆ ಕಾಲಿಟ್ಟಿರುವ “ಬಾಲ ವಿಜ್ಞಾನ" ಮಾಸಪತ್ರಿಕೆ ಈ ದಿಶೆಯಲ್ಲಿ ಸಾಕಷ್ಟು ಯಶಸ್ಸು ಗಳಿಸಿದೆ: ಪರಿಣಾಮವಾಗಿ ಜನಪ್ರಿಯವಾಗಿದೆ. ವಿಜ್ಞಾನ ವಿಷಯಗಳನ್ನು ಕುರಿತ ಕಿರುಹೊತ್ತಗೆಗಳನ್ನು ಪ್ರಕಟಿಸುವ ಕಾರ್ಯವನ್ನು ಪರಿಷತ್ತು ಕೈಗೆತ್ತಿಕೊಂಡು ಈಗಾಗಲೇ 135ಕ್ಕೂ ಹೆಚ್ಚು ಪುಸ್ತಕಗಳನ್ನು ಪ್ರಕಟಿಸಿದೆ. ಪುಸ್ತಕಗಳ ಪ್ರಕಟಣೆಗೆ ಕರಾವಿಪ ವಿಜ್ಞಾನದ ಎಲ್ಲಾ ಪ್ರಕಾರಗಳನ್ನು ತನ್ನ ವ್ಯಾಪ್ತಿಗೆ ತೆಗೆದುಕೊಂಡಿದ್ದು ವಿದ್ಯಾರ್ಥಿಗಳ ಮತ್ತು ಜನಸಾಮಾನ್ಯರ ದೈನಂದಿನ ಜೀವನಕ್ಕೆ ಸಂಬಂಧಿಸಿದ ವಿಷಯಗಳಿಗೆ ಆದ್ಯತೆ ನೀಡಿ ಪುಸ್ತಕಗಳನ್ನು ಪ್ರಕಟಿಸುತ್ತಿದೆ. ಈ ದಿಸೆಯಲ್ಲಿ ಹೆಸರಾಂತ ಲೇಖಕರಾದ ಪ್ರೊ|| ಎಂ.ಜೆ.ಸುಂದರ್ರಾಮ್ ಅವರು ಬರೆದುಕೊಟ್ಟ "ಪೆಪ್ಟಿಕ್ ಅಲ್ಸರ್ : ಹೊಸಬೆಳಕು” ಎಂಬ ಪುಸ್ತಕವನ್ನು ಕರಾವಿಪ ಹೊರತರುತ್ತಿರುವುದು ಹೆಮ್ಮೆಯೆನಿಸಿದೆ’ ಎಂಬುದಾಗಿ ತಿಳಿಸಿದ್ದಾರೆ.
©2024 Book Brahma Private Limited.