ಪೊದೆಯಿಂದಿಳಿದ ಎದೆಯ ಹಕ್ಕಿ

Author : ಗುರುಪಾದ ಮರಿಗುದ್ದಿ

Pages 176

₹ 150.00




Year of Publication: 2019
Published by: ಶ್ರೀಸಿದ್ಧಲಿಂಗೇಶ್ವರ ಬುಕ್ ಡಿಪೋ ಮತ್ತು ಪ್ರಕಾಶನ
Address: ಮುಖ್ಯಬೀದಿ, ಕಲಬುರಗಿ- 585101

Synopsys

ಕುವೆಂಪು ಸಾಹಿತ್ಯದ ಓದು-ಅನುಸಂಧಾನ- ವಿಮರ್ಶೆಗಳ ಕುರಿತ ಸಂಕಲನ ‘ಪೊದೆಯಿಂದಿಳಿದ ಎದೆಯ ಹಕ್ಕಿ’. ಕುವೆಂಪು ಕಾದಂಬರಿಗಳ ಸಾಂಸ್ಕೃತಿಕ ಅಧ್ಯಯನ ಎಂಬ ವಿಷಯದಡಿ ಸಂಶೋಧನೆ ನಡೆಸಿ ಪಿ.ಎಚ್.ಡಿ ಪದವಿ ಪಡೆದಿರುವ ಡಾ. ಗುರುಪಾದ ಮರಿಗುದ್ದಿ ಅವರು ಈ ಕೃತಿ ರಚಿಸಿದ್ದಾರೆ.

ಈ ಪುಸ್ತಕದಲ್ಲಿ ಹತ್ತು ಅಧ್ಯಾಯಗಳಿವೆ. ಮೊದಲನೆ ಅಧ್ಯಾಯದ ಶೀರ್ಷಿಕೆ ಕೂಡ ಪೊದೆಯಿಂದಿಳಿದ ಎದೆಯ ಹಕ್ಕಿ, ಲೇಖಕರು ಕುವೆಂಪು ಅವರ ಬದುಕು-ಬರಹಗಳ ಕುರಿತ ಒಂದು ಪಕ್ಷಿನೋಟವನ್ನು ನೀಡಿದ್ದಾರೆ. ಕುವೆಂಪು ಸಾಹಿತ್ಯವಿಸ್ತಾರದ ಮೈಲುಗಲ್ಲುಗಳನ್ನು ಗುರುತಿಸಿದ್ದಾರೆ. ಈ ಕೃತಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಕೊಡಮಾಡುವ 2019ನೇ ಸಾಲಿನ ಅತ್ಯುತ್ತಮ ಕೃತಿ ಬಹುಮಾನ ಲಭಿಸಿದೆ. 

About the Author

ಗುರುಪಾದ ಮರಿಗುದ್ದಿ
(20 June 1956)

ಡಾ. ಗುರುಪಾದ ಮರಿಗುದ್ದಿ ಅವರು ಸೃಜನಶೀಲ ಹಾಗೂ ಸೃಜನೇತರ ಕ್ಷೇತ್ರಗಳೆರಡರಲ್ಲಿಯೂ ಕೃತಿ ರಚಿಸಿರುವ 'ಸವ್ಯಸಾಚಿ’.  ಕಾವ್ಯಲಹರಿಯಿಂದ ಆರಂಭವಾದ ಸಾಹಿತ್ಯ ಕೃಷಿಯು ಸಂಶೋಧನೆ, ವಿಮರ್ಶೆ ಹಾಗೂ ಕುವೆಂಪು ಸಾಹಿತ್ಯದ ಬಗ್ಗೆ ಆಳವಾದ ಅಧ್ಯಯನ, ಲೋಕಾನುಭವ ಸಾಹಿತ್ಯಗಳಲ್ಲಿ ಹರಡಿದೆ. ಅವರು ಕುವೆಂಪು ಸಾಹಿತ್ಯ ಕುರಿತಂತೆ ಬರೆದ ನಿರಂತರ ನಿಷ್ಠಾವಂತ ಕೃಷಿಕರು. ಕುವೆಂಪು ಸಾಹಿತ್ಯದ ಕುರಿತು ಉತ್ತರ ಕರ್ನಾಟಕದಲ್ಲಿ ಕುವೆಂಪು ಸಾಹಿತ್ಯದ ಪರಿಚಯ ಕೈಗೊಂಡಿದ್ದಾರೆ. ಗುರುಪಾದ ಮರಿಗುದ್ದಿ ಅವರು ಸ್ವಂತ ಪ್ರತಿಭೆ ಹಾಗೂ ಸತತ ಅಭ್ಯಾಸದಿಂದ ಸಾಹಿತ್ಯದ ಹಲವು ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದ್ದಾರೆ. ವಿದ್ಯಾರ್ಥಿಗಳ ಪ್ರೀತಿ ಸಂಪಾದಿಸಿರುವ ಅವರು ವಾಗ್ಮಿಯಾಗಿಯೂ ಜನಪ್ರಿಯ. ಸರಳತೆ ಸಜ್ಜನಿಕೆಗೆ ಹೆಸರಾದ ಮರಿಗುದ್ದಿ ...

READ MORE

Awards & Recognitions

Related Books