‘ಪ್ರತ್ಯಭಿಜ್ಞಾನ’ ಹಿರಿಯ ಲೇಖಕ ಕೀರ್ತಿನಾಥ ಕುರ್ತಕೋಟಿ ಅವರ ಕೃತಿ. ಮಹಾಕವಿ ಕಾಳಿದಾಸನ ಅಭಿಜ್ಞಾನ ಶಾಕುಂತಲೆ ಎಂಬ ಮಹಾಕಾವ್ಯದ ವಿಮರ್ಶಾ ಕೃತಿ ಪ್ರತ್ಯಭಿಜ್ಞಾನ. ಇಲ್ಲಿ ಶಾಕುಂತಲೆಯ ಪರವಾದ ವಿಭಿನ್ನ ನೋಟಕ್ರಮಗಳನ್ನು ಮುಂದಿಟ್ಟು ದುಷ್ಯಂತನ ಮರೆವಿನ ಕುರಿತು ವಿಮರ್ಶಿಸಲಾಗಿದೆ. ಮಹಾಕಾವ್ಯ ಅಭಿಜ್ಞಾನ ಶಾಕುಂತಲೆಯ ಮಹತ್ವದ ವಿಮರ್ಶೆಗಳಲ್ಲಿ ಪ್ರತ್ಯಭಿಜ್ಞಾನ ಕೃತಿಯೂ ಒಂದಾಗಿದೆ.
ಕವಿ, ನಾಟಕಕಾರ, ವಿಮರ್ಶಕ, ಅನುವಾದಕ, ಅಂಕಣಕಾರ ಕೀರ್ತಿನಾಥ ಕುರ್ತಕೋಟಿ ಅವರು 12-10-1928ರಂದು ಗದಗಿನಲ್ಲಿ ಜನಿಸಿದರು. ತಂದೆ ಡಿ.ಕೆ.ಕುರ್ತಕೋಟಿ, ತಾಯಿ-ಪದ್ಮಾವತಿಬಾಯಿ. ಕೆಲಕಾಲ ಗದಗಿನ ಶಾಲೆಯಲ್ಲಿ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ ಕುರ್ತಕೋಟಿಯವರು, ಸ್ನಾತಕೋತ್ತರ ಪದವಿಯನ್ನು ಪಡೆದು, ಗುಜರಾತಿಗೆ ತೆರಳಿ ಅಲ್ಲಿ ಕಾಲೇಜು ಉಪನ್ಯಾಸಕರಾಗಿ ವೃತ್ತಿಯನ್ನು ಕೈಗೊಂಡರು. ಅಲ್ಲಿ ನಿವೃತ್ತಿಯನ್ನು ಪಡೆದ ನಂತರವೇ ಧಾರವಾಡಕ್ಕೆ ಮರಳಿದರು. ಜಿ.ಬಿ.ಜೋಶಿಯವರ ಮನೋಹರ ಗ್ರಂಥಮಾಲೆಗೆ ಮೊದಲಿನಿಂದಲೂ ಸಾಹಿತ್ಯ ಸಲಹಾಕಾರರಾಗಿದ್ದರು. ಜೊತೆಗೆ ಪ್ರಜಾವಾಣಿಯಲ್ಲಿ ವಾರವಾರವೂ ಪ್ರಕಟವಾಗುತ್ತಿದ್ದ "ಉರಿಯ ನಾಲಗೆ" ಎಂಬ ಅಂಕಣ ಬಹಳ ಜನಪ್ರಿಯವಾಗಿತ್ತು. 1959ರಲ್ಲಿ ಮನೋಹರ ಗ್ರಂಥಮಾಲೆ ಹೊರತಂದ ತನ್ನ ರಜತ ವರ್ಷದ ಹೊತ್ತಿಗೆ “ನಡೆದು ...
READ MORE