ಪ್ರೊ. ಕೆ. ಈ. ರಾಧಾಕೃಷ್ಣ

Author : ಸತ್ಯಮಂಗಲ ಮಹಾದೇವ

Pages 52

₹ 45.00




Year of Publication: 2016
Published by: ಕನ್ನಡ ಸಂಘ, ಕಾಂತಾವರ
Address: ಕೆ.ಬಿ. ಜಿನರಾಜ ಹೆಗ್ಡೆ ಸ್ಮಾರಕ ಕನ್ನಡ ಭವನ, ಕಾಂತಾವರ, ಅಂಚೆ-ಕಾಂತಾವರ-574129, ಕಾರ್ಕಳ ತಾಲ್ಲೂಕು, ಉಡುಪಿ ಜಿಲ್ಲೆ
Phone: 8548933733

Synopsys

ಶಿಕ್ಷಣ ತಜ್ಞ ಕೆ.ಇ. ರಾಧಾಕೃಷ್ಣ ಅವರು ಸಾಹಿತಿ-ಲೇಖಕ ಕೂಡ. ’ಕಣ್ಣಕಾಡು’ ಮಹಾಕಾವ್ಯ ಪ್ರಬಂಧ ಹಾಗೂ ’ಭಾಗೀರಥಿ ಸಮುದ್ರ ಕವನ ಸಂಕಲನ ಪ್ರಕಟಿಸಿರುವ ರಾಧಾಕೃಷ್ಣ ಅವರು ಜನಪ್ರಿಯ ಅಂಕಣಕಾರರೂ ಹೌದು. ಮಂಗಳೂರಿನಿಂದ ಪ್ರಕಟವಾಗುತ್ತಿದ್ದ ’ಮುಂಗಾರು’ ಪತ್ರಿಕೆಗೆ ’ಧೃತರಾಷ್ಟ್ರನ ದಿನಚರಿ’ ಎಂಬ ಅಂಕಣ ಬರೆಯುತ್ತಿದ್ದ ಅವರು ’ಜನವಾಹಿನಿ’ ಪತ್ರಿಕೆಗೆ ’ಗೋಲಗುಮ್ಮಟ’ ಎನ್ನುವ ಅಂಕಣ ಮಾಲೆಯಲ್ಲಿ ಸಮಕಾಲೀನ ವಿಶ್ವದ ಚಟುವಟಿಕೆಗಳ ಬಗ್ಗೆ ಬರೆಯುತ್ತಿದ್ದರು. ಇಂಗ್ಲಿಷಿನಲ್ಲಿಯೂ ಬರೆದು ಪುಸ್ತಕ ಪ್ರಕಟಿಸಿರುವ ಅವರು ಅನುವಾದ ಕ್ಷೇತ್ರದಲ್ಲಿಯೂ ಗಣನೀಯ ಸಾಧನೆ ಮಾಡಿದ್ದಾರೆ. ರಾಧಾಕೃಷ್ಣ ಅವರ ಬದುಕು-ಬರೆಹ ದಾಖಲಿಸುವ ಕೃತಿಯಿದು. ಕಾಂತಾವರ ಕನ್ನಡ ಸಂಘವು ಪ್ರಕಟಿಸುತ್ತಿರುವ ’ನಾಡಿಗೆ ನಮಸ್ಕಾರ’ ಸರಣಿಯ 168 ಪುಸ್ತಕ.

About the Author

ಸತ್ಯಮಂಗಲ ಮಹಾದೇವ
(12 June 1983)

ಸತ್ಯಮಂಗಲ ಮಹಾದೇವ ಅವರು ಮೂಲತಃ ತುಮಕೂರು ಜಿಲ್ಲೆ, ತುಮಕೂರು ತಾಲ್ಲೂಕಿನ ಸತ್ಯಮಂಗಲ ಗ್ರಾಮದಲ್ಲಿ 12-06-1983 ರಲ್ಲಿ ರಾಜಣ್ಣ ಮತ್ತು ಜಯಮ್ಮ ದಂಪತಿಯ ಮಗನಾಗಿ ಜನಿಸಿದರು.  ಕನ್ನಡದ ಸಮಕಾಲೀನ ಯುವ ಬರಹಗಾರರಲ್ಲಿ ಸೂಕ್ಷ್ಮಸಂವೇದಿ ಹಾಗೂ ಜೀವಪರ ಚಿಂತನೆಯ ಕವಿಯಾಗಿ,  ಕಾವ್ಯ, ವಿಮರ್ಶೆ, ವ್ಯಕ್ತಿಚಿತ್ರ, ಸಂಪಾದಕೀಯ, ಸಂಶೋಧನೆಯ ಕ್ಷೇತ್ರದಲ್ಲಿ ಕೆಲಸಮಾಡುತ್ತಿದ್ದಾರೆ. ಬೆಂಗಳೂರು ಉತ್ತರ ತಾಲೂಕಿನ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ 2017 ರಲ್ಲಿ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದರು.  ಕೇಂದ್ರಸಾಹಿತ್ಯ ಅಕಾಡೆಮಿಯು ಆಯೋಜಿಸಿದ್ದ "ರಾಷ್ಟ್ರೀಯ ಯುವ ಬರಹಗಾರರ ಸಮ್ಮೇಳನ" ಕೇರಳ, ಪಂಜಾಬ್, ಮಹಾರಾಷ್ಟ್ರ, ಅಸ್ಸಾಂ ಹೀಗೆ ರಾಷ್ಟ್ರದ ಅನೇಕ ಕಡೆಗಳಲ್ಲಿ ಕಾವ್ಯವಾಚನ ಮಾಡಿ ...

READ MORE

Related Books