ಪ್ರೊ.ಎಲ್.ಎಸ್. ಶೇಷಗಿರಿ ರಾವ್

Author : ಎನ್.ಎಸ್. ಶ್ರೀಧರಮೂರ್ತಿ

Pages 124

₹ 50.00




Year of Publication: 2007
Published by: ಕನ್ನಡ ಸಾಹಿತ್ಯ ಪರಿಷತ್ತು
Address: ಪಂಪಮಹಾಕವಿ ರಸ್ತೆ, ಚಾಮರಾಜಪೇಟೆ, ಬೆಂಗಳೂರು- 560018

Synopsys

‘ಪ್ರೊ.ಎಲ್.ಎಸ್. ಶೇಷಗಿರಿ ರಾವ್’ ಬದುಕು ಮತ್ತು ಸಾಹಿತ್ಯ ಕೃತಿಯನ್ನು ಲೇಖಕ ಎನ್.ಎಸ್. ಶ್ರೀಧರಮೂರ್ತಿ ಅವರು ಸಂಪಾದಿಸಿದ್ದಾರೆ. ಎಲ್ ಎಸ್ ಎಸ್ ಎಂಬ ಸಂಕ್ಷಿಪ್ತ ನಾಮದಿಂದಲೇ ನಾಡಿಗೆಲ್ಲಾ ಪರಿಚಿತರಾಗಿರುವ ಶೇಷಗಿರಿ ರಾವ್,  ಇಂಗ್ಲಿಷ್ ಪ್ರಾಧ್ಯಾಪಕರಾಗಿದ್ದರು. ನವೋದಯ ಸಾಹಿತ್ಯ ಘಟ್ಟದಿಂದ ಇತ್ತೀಚಿನ ದಲಿತ-ಬಂಡಾಯ ಸಾಹಿತ್ಯದವರೆಗೂ ಒಮ್ಮೆ ಕಣ್ಣು ಹಾಯಿಸಿದರೆ ಗೋಚರಿಸುವ ಒಂದು ಮುಖ್ಯ ಅಂಶ ಇಂಗ್ಲಿಷ್ ಅಧ್ಯಾಪಕರಾಗಿದ್ದುಕೊಂಡು ಕನ್ನಡ ಸಾಹಿತ್ಯಕ್ಕೆ ಅಗಾಧ ಕೊಡುಗೆ ನೀಡಿರುವ ದೀರ್ಘ ಪರಂಪರೆ ಈ ಪರಂಪರೆಗೆ ನಾಂದಿ ಹಾಡಿದವರು. ಬುನಾದಿ ಹಾಕಿದವರು ಬಿಎಂಶ್ರೀ. ಎಲ್.ಎಸ್.ಎಸ್ ಅವರು ಬಿಎಂಶ್ರೀ ಅವರ ನೇರ ಶಿಷ್ಯರು ಗುರುವಿನ ಪರಂಪರೆಯನ್ನು ಸಾರ್ಥಕವಾಗಿ ಮುಂದುವರೆಸಿದವರು. ಎಲ್.ಎಸ್.ಎಸ್ ಅವರ ಒಟ್ಟು ಸಾಹಿತ್ಯವನ್ನು ಕನ್ನಡ ವಿಮರ್ಶಾ ಪರಂಪರೆಯಲ್ಲಿ ಇಟ್ಟು ನೋಡುವ ಒಂದು ಪ್ರಾಮಾಣಿಕ ಪ್ರಯತ್ನ ಈ ಕೃತಿಯಲ್ಲಿದೆ.

About the Author

ಎನ್.ಎಸ್. ಶ್ರೀಧರಮೂರ್ತಿ
(24 August 1968)

ಎನ್.ಎಸ್.ಶ್ರೀಧರಮೂರ್ತಿ ಮಂಗಳೂರು ವಿಶ್ವವಿದ್ಯಾಲಯದಿಂದ ಅರ್ಥಶಾಸ್ತ್ರದಲ್ಲಿ ಚಿನ್ನದ ಪದಕ ಮತ್ತು ರ್‍ಯಾಂಕ್ ನೊಂದಿಗೆ ಸ್ನಾತಕೋತ್ತರ ಪದವಿಯನ್ನು ಪಡೆದವರು. ಉಪನ್ಯಾಸಕರಾಗಿ ತಮ್ಮ ವೃತ್ತಿಜೀವನವನ್ನು ಆರಂಭಿಸಿದ ಇವರು  'ಮಲ್ಲಿಗೆ' ಮಾಸಪತ್ರಿಕೆಯ ಮೂಲಕ ಪತ್ರಿಕೋದ್ಯಮಕ್ಕೆ ಬಂದು ಕಳೆದ ಎರಡು ದಶಕದಿಂದ ಸಾಂಸ್ಕೃತಿಕ ಪತ್ರಿಕೋದ್ಯಮವನ್ನು ಉಳಿಸುವಲ್ಲಿ ವಿವಿಧ ಪತ್ರಿಕೆಗಳ ಮೂಲಕ ಶ್ರಮಿಸುತ್ತಿದ್ದಾರೆ. ಚಲನಚಿತ್ರ ಇತಿಹಾಸದ ಕುರಿತು ಆಳವಾದ ಅಧ್ಯಯನ ನಡೆಸಿದ್ದಾರೆ. ಇವರು ಸಾಹಿತ್ಯ ಮತ್ತು ಆಧ್ಯಾತ್ಮ ಕ್ಷೇತ್ರದಲ್ಲಿಯೂ ಕೆಲಸ ಮಾಡಿದ್ದಾರೆ. ‘ಸಿಂಹಾವಲೋಕನ, ನಗುವ ನಯನ ಮಧುರ ಮೌನ, ಮಂಜುಳಾ ಎಂಬ ಎಂದೆಂದೂ ಮರೆಯದ ಹಾಡು, ಸಾಹಿತ್ಯ ಸಂವಾದ, ಹಾಡು ಮುಗಿಯುವುದಿಲ್ಲ, ಸಿನಿಮಾ ಎನ್ನುವ ನಾಳೆ’ ಅವರ ಪ್ರಮುಖ ಕೃತಿಗಳು. ಕನ್ನಡ ಚಿತ್ರಗೀತೆಗಳ ಸಾಂಸ್ಕೃತಿಕ ...

READ MORE

Related Books