ಆರ್. ಎಲ್. ನರಸಿಂಹಯ್ಯ ಕನ್ನಡ ವಿಜ್ಞಾನ ಸಾಹಿತ್ಯದ ಅವಿಸ್ಮರಣೀಯ ವಿದ್ವಾಂಸರು. ಹಲವಾರು ವಿಜ್ಞಾನ ಗ್ರಂಥಗಳನ್ನು ರಚಿಸಿರುವ ಇವರು ಸೆಂಟ್ರಲ್ ಕಾಲೇಜಿನಲ್ಲಿ ಭೌತವಿಜ್ಞಾನದ ಅಧ್ಯಾಪಕರಾಗಿದ್ದರು. ಮತ್ತು ಇದೇ ಸಂಸ್ಥೆಯಲ್ಲಿ ವಿಜ್ಞಾನವನ್ನು ಆಧುನಿಕ ಕನ್ನಡಕ್ಕೆ ಒಗ್ಗಿಸುವಂತಹ ವಿಜ್ಞಾನ ಕೃತಿಗಳನ್ನು ಆರ್. ಎಲ್. ನರಸಿಂಹಯ್ಯನವರು ಪ್ರಕಟಿಸಿದರು. ಇದರ ಜೊತೆಗೆ ”ಪ್ರಬುದ್ಧ ಕರ್ನಾಟಕ ” ಸಾಹಿತ್ಯ ಪತ್ರಿಕೆಯನ್ನು ಆರಂಭಿಸಿದ ಹೆಗ್ಗಳಿಕೆ. ಈ ಸಂಸ್ಥೆಯನ್ನು ಮುನ್ನಡೆಸುವಲ್ಲಿ ಇವರ ಪಾತ್ರ ದೊಡ್ಡದು. ಇವರ ವಿಜ್ಞಾನ, ಸಾಹಿತ್ಯ ಕೃಷಿ, ಸಂಘ -ಸಂಸ್ಥೆಗಳ ಒಡನಾಟವನ್ನು ಸುಮಂಗಲಾ ಎಸ್. ಮುಮ್ಮಿಗಟ್ಟಿ ಅವರು ಉದಯಭಾನು ಸುವರ್ಣ ಪುಸ್ತಕಮಾಲೆಯಡಿ ಹೊರತಂದಿರುವ ಕೃತಿಯಲ್ಲಿ ಪ್ರಕಟಿಸಿದ್ದಾರೆ.
ವಿಜ್ಞಾನ ಸಂವಹನಕ್ಕಾಗಿ ರಾಷ್ಟ್ರದ ಅತ್ಯುನ್ನತ ಪ್ರಶಸ್ತಿ ಪುರಸ್ಕೃತರಾದ ಸುಮಂಗಲಾ ಅವರು ಈ ಪರಿಸರ ಮತ್ತು ಪರಿಸರ ಪತ್ರಿಕೋದ್ಯಮ ಪ್ರಶಸ್ತಿಗಳಲ್ಲದೇ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಆಕಾಡಮಿಯಿಂದ ಶ್ರೇಷ್ಠ ವಿಜ್ಞಾನ ಲೇಖಕಿ ಪ್ರಶಸ್ತಿ ಪಡೆದಿದ್ದಾರೆ. ಜೈವಿಕ ವೈವಿಧ್ಯದ ಅತ್ಯುತ್ತಮ ಸಂವಹನಕ್ಕಾಗಿ ಲಂಡನ್ನಿನ ಎನ್ವಿರಾನ್ಮೆಂಟ್ ಎಜುಕೇಶನ್ ಸಂಸ್ಥೆಯ ಮನ್ನಣೆ ಪಡೆದಿದ್ದಾರೆ. ಬೆಂಗಳೂರು ಆಕಾಶವಾಣಿಯಲ್ಲಿ ಕಾರ್ಯಕ್ರಮ ನಿರ್ವಾಹಕರಾಗಿರುವ ಇವರು ವಿಜ್ಞಾನ ಕಾರ್ಯಕ್ರಮಗಳಿಗಾಗಿ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಪ್ರಶಸ್ತಿಗಳನ್ನು ಪಡೆದವರು. ಇವರ ಹಲವು ಪುಸ್ತಕಗಳು ನವಕರ್ನಾಟಕದಿಂದ ಪ್ರಕಟವಾಗಿವೆ. ನವಕರ್ನಾಟಕದ ವಿಜ್ಞಾನ ಸರಳ ಪರಿಚಯ ಮಾಲಿಕೆಯ ಸಂಪಾದಕರಲ್ಲಿ ಒಬ್ಬರು. ಇವರ ಹಲವಾರು ಪುಸ್ತಕ- ಲೇಖನ ...
READ MORE