ಎನ್.ಮರಿಶಾಮಾಚಾರ್ ಅವರು ಭಾರತದ ಸುಪ್ರಸಿದ್ಧ ವರ್ಣಚಿತ್ರಗಾರ ರಾಜ ರವಿ ವರ್ಮ ಅವರ ಬದುಕು ಮತ್ತು ಕಲಾಕೃತಿಗಳ ಕುರಿತು ಬರೆದ ಕೃತಿ. ರಾಜಾ ರವಿವರ್ಮರು ಕಿಳಿಮಾನೂರು ಊರಿನ, ರಾಜವಂಶಕ್ಕೆ ಸೇರಿದವರು. ಬಾಲ್ಯದಿಂದಲೇ ಕಲೆಯಲ್ಲಿ ಆಸಕ್ತಿ ಹೊಂದಿದ್ದ ಅವರು ಅತ್ಯದ್ಭುತ ಕಲಾಕೃತಿಗಳನ್ನು ರಚಿಸಿದ್ದಾರೆ. ಸ್ವತಃ ಕಲಾವಿದರಾದ ಎನ್.ಮರಿಶಾಮಾಚಾರ್ ಅವರು ರಾಜ ರವಿವರ್ಮನ ಕಲಾಕೃತಿಗಳ ಕುರಿತು ವಿವರಿಸಿರುವ ಕೃತಿ ಇದು.
ಕರ್ನಾಟಕದ ಕಲಾವಲಯದ ಹಿರಿಯರು ’ಮರಿ’ ಎಂದು ಕರೆಯುತ್ತಿದ್ದ ಎನ್. ಮರಿಶಾಮಾಚಾರ್ ಅವರು ರಾಜ್ಯದ ಅಪರೂಪದ ಕಲಾಪರಿಚಾರಕ-ಲೇಖಕ. ಕರ್ನಾಟಕ ಶಿಲ್ಪಕಲಾ ಅಕಾಡೆಮಿ ರಿಜಿಸ್ಟ್ರಾರ್ ಆಗಿ ಕಾರ್ಯ ನಿರ್ವಹಿಸಿ ನಿವೃತ್ತರಾಗಿದ್ದ ಮರಿಶಾಮಾಚಾರ್ ಅವರು ಕಲಾಸಾಹಿತಿ. ’ನಡೆದಾಡುವ ಕಲಾಕೋಶ’ ಎಂದು ಕಲಾವಲಯದಲ್ಲಿ ಅವರನ್ನು ಗುರುತಿಸಲಾಗುತ್ತಿತ್ತು. ವಿಜಯಪುರದಲ್ಲಿ 1951ರ ಮೇ 15ರಂದು ಜನಿಸಿದ ಮರಿಶಾಮಾಚಾರ್ ಅವರು ಜಯನಗರದ ಆರ್.ವಿ. ಹೈಸ್ಕೂಲಿನಲ್ಲಿ ಓದುತ್ತಿರುವಾಗ ಡ್ರಾಯಿಂಗ್ ಮಾಡಲು ಆರಂಭಿಸಿದ್ದರು. ಅವರ ಅಣ್ಣ ಕೆನ್ ಶಾಲೆಯ ವಿದ್ಯಾರ್ಥಿಯಾಗಿದ್ದ. ಕಲೆಯ ಅಭಿರುಚಿ ಬಂದದ್ದು ಅವರ ಅಣ್ಣನಿಂದಲೇ. ಅಣ್ಣನ ಮೂಲಕ ಪರಿಚಯವಾದ ಕಲಾಗುರು ಆರ್.ಎಂ. ಹಡಪದ ಅವರ ಶಿಷ್ಯರಾಗಿದ್ದ ’ಮರಿ’ ಅವರು ಅವರ ಬಳಿ ಐದು ವರ್ಷ ...
READ MORE