ರಶೋಮೊನ್

Author : ಕೆ.ವಿ. ಸುಬ್ಬಣ್ಣ

Pages 142

₹ 25.00




Year of Publication: 1980
Published by: ಅಕ್ಷರ ಪ್ರಕಾಶನ
Address: ಹೆಗ್ಗೋಡು, ತಾಲೂಕು: ಸಾಗರ, ಜಿಲ್ಲೆ: ಶಿವಮೊಗ್ಗ-577401

Synopsys

ಜಪಾನಿನ ಚಲನಚಿತ್ರ ನಿರ್ದೆಶಕ ಅಕಿರ ಕುರೊಸವನ ಅವರ ರಶೋಮೊನ್ ಚಿತ್ರಲೇಖನ, ಜಪಾನಿ ಚಲನಚಿತ್ರದ ಇತಿಹಾಸ, ಕುರೊಸವನ ಅವರ ಬದುಕು , ರಶೋಮೊನ್ ಕೃತಿ ವಿಮರ್ಶೆ ಹಾಗೂ ಚಿತ್ರಕ್ಕೆ ಆಧಾರವಾದ ಎರಡು ಕಥೆಗಳ ಅನುವಾದವನ್ನು ಈ ಕೃತಿಯು ಒಳಗೊಂಡಿದೆ. ರಶೋಮೊನ್ ಚಲನಚಿತ್ರವು, 1951ರಲ್ಲಿ ಜರುಗಿದ ವೆನಿಸ್ ಚಲನಚಿತ್ರೋತ್ಸವದಲ್ಲಿ ಅತ್ಯುತ್ತಮ ಚಲನಚಿತ್ರ ಪ್ರಶಸ್ತಿ ಪಡೆದಿತ್ತು. ಪೌರ್ವಾತ್ಯ ಚಿತ್ರವೊಂದು ಅದೇ ಮೊದಲ ಬಾರಿಗೆ ವಿಶ್ವದ ಶ್ರೇಷ್ಠ ಚಲನಚಿತ್ರದ ಪ್ರಶಸ್ತಿ ಬಾಚಿಕೊಂಡಿದ್ದು, ವಿಶ್ವವನ್ನೇ ಬೆರಗುಗೊಳಿಸಿತ್ತು. ಇದಕ್ಕಿರುವ ಕಾರಣಗಳನ್ನೂ ಸಹ ಲೇಖಕರು ವಿಶ್ಲೇಷಿಸಿದ್ದಾರೆ.

About the Author

ಕೆ.ವಿ. ಸುಬ್ಬಣ್ಣ
(20 February 1931)

ಕೆ.ವಿ. ಸುಬ್ಬಣ್ಣ ಕನ್ನಡದ ಅಪರೂಪದ ವ್ಯಕ್ತಿಗಳಲ್ಲಿ ಒಬ್ಬರು. ಮೈಸೂರು ವಿಶ್ವವಿದ್ಯಾನಿಲಯದಿಂದ ಎಂ. ಎ. ಪದವಿ ಪಡೆದ ನಂತರ ಅವರು ಕೃಷಿಕಾಯಕ ಆರಂಭಿಸಿದರು. ಸಾಹಿತ್ಯ ಕ್ಷೇತ್ರದಲ್ಲಿ ಅವರು ಮಾಡಿದ ಸಾಧನೆ ಅಚ್ಚರಿಪಡುವ ಹಾಗಿದೆ. ಕವಿ, ನಾಟಕಕಾರ, ಅನುವಾದಕರಾಗಿದ್ದ ಅವರು 'ಅಕ್ಷರ ಪ್ರಕಾಶನ' 'ನೀನಾಸಂ ರಂಗ ಚಟುವಟಿಕೆ'ಗಳನ್ನು ನಿರ್ವಹಿಸಿದವರು. ಭಾರತೀಯ ಸಂಸ್ಕೃತಿಗೆ ವಿಶಿಷ್ಟ ಮಾದರಿ ಎನ್ನುವ ಹಾಗೆ ಸಾಹಿತ್ಯಕ, ಸಾಂಸ್ಕೃತಿಕ ಚಟುವಟಿಕೆಗಳನ್ನು ಪುಟ್ಟಹಳ್ಳಿಯಲ್ಲಿ ನಡೆಸಿದ್ದು ಒಂದು ದಾಖಲೆ. ಮ್ಯಾಗ್ಸೆಸ್ಸೆ ಪ್ರಶಸ್ತಿಯಿಂದ ಹೆಗ್ಗೋಡು ಅಂತರರಾಷ್ಟ್ರೀಯ ನಕ್ಷೆಯಲ್ಲಿ ದಾಖಲಾಯಿತು. ಕೆ.ವಿ. ಸುಬ್ಬಣ್ಣ ಒಬ್ಬ ವ್ಯಕ್ತಿಯಲ್ಲ, ಮಹಾನ್ ಶಕ್ತಿ. ಅವರ ಬೆಳವಣಿಗೆ ವೈಯಕ್ತಿಕವಾದದ್ದಲ್ಲ, ಸಾಂಘಿಕವಾದದ್ದು. 'ಅಕ್ಷರ ಪ್ರಕಾಶನದ ಮೂಲಕ , 'ನೀನಾಸಂ' ಮೂಲಕ ಅನೇಕ ಪ್ರತಿಭೆಗಳನ್ನು ಅವರು ...

READ MORE

Related Books