“ರೇಷ್ಮೆ ಬಟ್ಟೆ” ಒನಪು ಬಟ್ಟೆ ಒರಟು ದಾರಿ ವಸುಧೇಂದ್ರ ವಿರಚಿತ ಕಾದಂಬರಿಯಾಗಿದೆ. ಈ ಕಾದಂಬರಿಯು ಎರಡನೆಯ ಶತಮಾನದ ಏಷ್ಯಾಖಂಡದ ಹಲವು ಚಾರಿತ್ರಿಕ ಸಂಗತಿಗಳನ್ನು ಇಟ್ಟುಕೊಂಡು, ಅಂದಿನ ಯುಗಸಂಘರ್ಷವು ಜನಸಾಮಾನ್ಯರಲ್ಲಿ ತಂದಿರಬಹುದಾದ ಸವಾಲುಗಳನ್ನು ಕಾಲ್ಪನಿಕವಾದ ಕತೆಯ ಮೂಲಕ ಜನರ ಮುಂದಿಡಲು ಪ್ರಯತ್ನಿಸುತ್ತದೆ. ಹಲವು ದೇಶಗಳ ಮತ್ತು ಹಲವು ಧರ್ಮಗಳ ವಿಸ್ತಾರವಾದ ಅಧ್ಯಯನ ಮಾಡಿ ಈ ಕೃತಿಯನ್ನು ಲೇಖಕರು ರಚಿಸಿದ್ದಾರೆ. ಈ ಕಾಲದ ಭೂಪಟದ ದೇಶಗಳಾದ ಚೀನಾ, ಕಝಕಿಸ್ತಾನ್, ಉಜ್ಜಿಕಿಸ್ತಾನ್, ಅಫಘನಿಸ್ತಾನ್, ಭಾರತ, ಪಾಕಿಸ್ತಾನ್, ಇರಾನ್, ಇರಾಕ್, ಟರ್ಕಿ - ಹೀಗೆ ಹಲವು ದೇಶಗಳನ್ನು ಹಾದು ಹೋಗುವ ಈ ದಾರಿಯು ವ್ಯಾಪಾರದ ಉದ್ದೇಶಕ್ಕಾಗಿ ಸಂಭವಿಸಿದರೂ ಅದಕ್ಕಾಗಿಯೇ ಸೀಮಿತವಾಗಿ ಉಳಿಯಲಿಲ್ಲ. ಧರ್ಮಗಳು, ಭಾಷೆಗಳು, ಲಿಪಿಗಳು, ಕೌಶಲ್ಯಗಳು, ಕಲಾಪ್ರಕಾರಗಳು, ತಂತ್ರಜ್ಞಾನಗಳು - ಹೀಗೆ ಹಲವು ವಿದ್ಯಮಾನಗಳು ಈ ದಾರಿಯ ಮೂಲಕ ಅತ್ತಿತ್ತ ಚಲಿಸಿದವು. ಆ ಕಾಲದ ಜನರು ಅವೆಲ್ಲವನ್ನೂ ತಮ್ಮ ಅವಶ್ಯಕತೆಗೆ ತಕ್ಕಂತೆ ಅಳವಡಿಸಿಕೊಂಡು ಹೊಸ ಜಗತ್ತನ್ನು ಸೃಷ್ಟಿಸಿಕೊಳ್ಳುವುದರಲ್ಲಿ ಸಫಲರಾದರು ಈ ಎಲ್ಲಾ ವಿಶಯದ ಕುರಿತು ಸಂಕ್ಷಿಪ್ತ ವಿವರಣೆ ಈ ಪುಸ್ತಕದಲ್ಲಿದೆ. ಇತಿಹಾಸದಲ್ಲಿ ಆಸಕ್ತಿ ಇರುವವರು ಓದಲೇ ಬೇಕಾದ ಪುಸ್ತಕವಾಗಿದೆ
ವಸುಧೇಂದ್ರ ಅವರು ಕನ್ನಡದ ಪ್ರಸಿದ್ಧ ಬರಹಗಾರರು ಹಾಗೂ ಪುಸ್ತಕ ಪ್ರಕಾಶಕರು. ಮುಖ್ಯವಾಗಿ ಕತೆ, ಕಾದಂಬರಿ, ಲಲಿತ ಪ್ರಬಂಧಗಳು ಇವರ ಬರವಣಿಗೆಯ ಪ್ರಕಾರಗಳು. ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ 1969ರಲ್ಲಿ ಜನಿಸಿದ ವಸುಧೇಂದ್ರ ಅಲ್ಲಿಯೇ ಪ್ರಾಥಮಿಕ ಶಿಕ್ಷಣವನ್ನು ಪೂರ್ಣಗೊಳಿಸಿದ್ದಾರೆ. ಆನಂತರ ಸುರತ್ಕಲ್ ನಿಂದ ಇಂಜಿನಿಯರಿಂಗ್ ಪದವಿ ಮತ್ತು ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಯ್ ನಿಂದ ಎಂ.ಇ. ಪದವಿ ಪಡೆದಿದ್ದಾರೆ. ಸುಮಾರು 20 ವರ್ಷಗಳ ಕಾಲ ಸಾಫ್ಟ್ ವೇರ್ ಕ್ಷೇತ್ರದಲ್ಲಿ ಕೆಲಸ ಮಾಡಿರುವ ಅವರು ಸದ್ಯ ಬೆಂಗಳೂರಿನಲ್ಲಿ ವಾಸವಿದ್ದು, ಸದ್ಯಕ್ಕೆ ಸಾಹಿತ್ಯಿಕ ಕೆಲಸಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಮನೀಷೆ, ಯುಗಾದಿ, ಚೇಳು, ಹಂಪಿ ಎಕ್ಸ್ ...
READ MORE