ರೋಗಗಳು ನಿಮಗೆಷ್ಟು ಗೊತ್ತು

Author : ಅಜಿತ್ ಹರೀಶಿ

₹ 80.00




Published by: ಮೈಲಾಂಗ್‌ ಬುಕ್ಸ್
Phone: 7259268000

Synopsys

ಲೇಖಕ ಅಜಿತ್ ಹರೀಶಿ ಅವರು ಸಂಪಾದಿಸಿರುವ ವೈದ್ಯಕೀಯ ಲೇಖನಗಳ ಕೃತಿ ʻರೋಗಗಳು ನಿಮಗೆಷ್ಟು ಗೊತ್ತುʼ. ಪುಸ್ತಕವು ಆರೋಗ್ಯ ಕೈಪಿಡಿಯಾಗಿದ್ದು, ಇಲ್ಲಿ ಹಲವು ರೋಗಗಳ ಕುರಿತು, ಬಾಲ್ಯ, ಯೌವನಗಳಲ್ಲಿ ಉಂಟಾಗುವ ಸಮಸ್ಯೆಗಳ ಬಗ್ಗೆ ಚರ್ಚಿಸಲಾಗಿದೆ. ಹಾಗೂ ಮಹಿಳೆಯರ ಆರೋಗ್ಯ ಮತ್ತು ವ್ಯಾಧಿಗಳು, ಅವುಗಳ ಕಾರಣ, ಪರಿಹಾರವನ್ನು ನೀಡಲಾಗಿದೆ. ಒಟ್ಟಾರೆ ಆರೋಗ್ಯದ ಅರಿವನ್ನು ಮೂಡಿಸುವ ಪ್ರಯತ್ನವನ್ನು ಈ ಪುಸ್ತಕದಲ್ಲಿ ಮಾಡಲಾಗಿದೆ.

About the Author

ಅಜಿತ್ ಹರೀಶಿ
(24 August 1978)

ಲೇಖಕ ಡಾ. ಅಜಿತ್  ಹರೀಶಿ ಮೂಲತಃ ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಹರೀಶಿ ಗ್ರಾಮದವರು. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹುಟ್ಟೂರಿನ ಸರ್ಕಾರಿ ಶಾಲೆಗಳಲ್ಲಿ, ಪದವಿಪೂರ್ವ ಶಿಕ್ಷಣವನ್ನು ಶಿರಸಿಯಲ್ಲಿ ಮುಗಿಸಿರುತ್ತಾರೆ. ಆಯುರ್ವೇದ ಮಹಾವಿದ್ಯಾಲಯ, ಹುಬ್ಬಳ್ಳಿಯಲ್ಲಿ ವೈದ್ಯಕೀಯ ಪದವೀಧರರಾದ  ಇವರು, ಆಕ್ಯುಪಂಕ್ಚರ್ ಚಿಕಿತ್ಸೆ , ಹಿಪ್ನೋಥೆರಪಿಯಲ್ಲಿಯೂ ಪರಿಣಿತರು.  ಪ್ರಸ್ತುತ ಹರೀಶಿಯಲ್ಲಿ ಖಾಸಗಿ ವೈದ್ಯರಾಗಿ ಕಾರ್ಯನಿರ್ವಹಿಸುತ್ತಿರುವ ಇವರು, ಬರವಣಿಗೆಯನ್ನು ತಮ್ಮ ಪ್ರವೃತ್ತಿಯನ್ನಾಗಿಸಿಕೊಂಡಿದ್ದಾರೆ. ಬಿಳಿಮಲ್ಲಿಗೆಯ ಬಾವುಟ, ಸೂರು ಸೆರೆಹಿಡಿಯದ ಹನಿಗಳು, ಕನಸಿನ ದನಿ ಪ್ರಕಟಿತ ಕವನ ಸಂಕಲನಗಳು.  ಪರಿಧಾವಿ, ಕಾಮೋಲ ಮತ್ತು ಮೂಚಿಮ್ಮ ಪ್ರಕಟಿತ ಕಥಾಸಂಕಲನಗಳು.  ಕಥಾಭರಣ ಸಂಪಾದಿತ ಕೃತಿಯಾಗಿದೆ. ಆರೋಗ್ಯದ ಅರಿವು ...

READ MORE

Related Books