ಎಸ್.ವಿ. ಪರಮೇಶ್ವರ ಭಟ್ಟರ ಇಂದ್ರಚಾಪ, ಇಂದ್ರಗೋಪ, ಕೃಷ್ಣಮೇಘ, ಮಾಚಯ್ಯ, ಜಹನಾರ, ಹಾಗೂ ಚಂದ್ರವೀದಿ ಕೃತಿಗಳನ್ನು ಒಳಗೊಂಡಿದೆ.
ನಟ, ನಾಟಕಕಾರ, ಸಾಹಿತಿ ನಾ. ದಾಮೋದರ ಶೆಟ್ಟಿ ಪ್ರಾರಂಭಿಕ ಶಿಕ್ಷಣವನ್ನು ಹುಟ್ಟೂರಾದ ಕೇರಳದ ಕಾಸರಗೋಡು ಜಿಲ್ಲೆಯ ಕುಂಬಳೆಯಲ್ಲಿ ಪಡೆದರು. ಆನಂತರ ಮೈಸೂರು ವಿಶ್ವವಿದ್ಯಾಲಯದಿಂದ ಎಂ.ಎ. ಪದವಿ ಹಾಗೂ ಡಾ. ಶ್ರೀನಿವಾಸ ಹಾವನೂರರ ಮಾರ್ಗದರ್ಶನದಲ್ಲಿ ‘ಮುದ್ದಣನ ಶಬ್ದ ಪ್ರತಿಭೆ’ ಮಹಾಪ್ರಬಂಧ ಮಂಡಿಸಿ ಮಂಗಳೂರು ವಿಶ್ವವಿದ್ಯಾಲಯದಿಂದ ಪಿಎಚ್.ಡಿ. ಪದವಿ ಪಡೆದಿದ್ದಾರೆ. 1975ರಲ್ಲಿ ಮಂಗಳೂರಿನ ಸಂತ ಅಲೋಷಿಯಸ್ ಕಾಲೇಜಿನಲ್ಲಿ ಕನ್ನಡವಿಭಾಗದ ಪ್ರಾಧ್ಯಾಪಕರಾಗಿ ವೃತ್ತಿ ಆರಂಭಿಸಿದ ಅವರು 36 ವರ್ಷಗಳ ದೀರ್ಘಸೇವೆಯ ನಂತರ 2011ರಲ್ಲಿ ನಿವೃತ್ತಿಯಾಗಿದ್ದಾರೆ. ಚಿಕ್ಕಂದಿನಿಂದಲೇ ನಾಟಕ, ಯಕ್ಷಗಾನ ಕಲೆಯ ಬಗ್ಗೆ ಆಸಕ್ತಿ ಹೊಂದಿದ್ದ ಅವರು ಕೇರಳದ ತ್ರಿಶೂರಿನ ಸ್ಕೂಲ್ ಆಫ್ ...
READ MORE