ಲೇಖಕ ಹಾಗೂ ಸಾಹಿತಿ ನಿಡಸಾಲೆ ಪುಟ್ಟಸ್ವಾಮಯ್ಯ ಅವರ ಕಾದಂಬರಿ-ಸಾಧನೆಯ ಹಾದಿಯಲ್ಲಿ. ಸಾಹಿತಿ ಡಾ. ದೊಡ್ಡರಂಗೇಗೌಡರು ಕೃತಿಗೆ ಬರೆದ ಬೆನ್ನುಡಿಯಲ್ಲಿ ‘ಈ ಕಾದಂಬರಿಯು ಓದಿಸಿಕೊಳ್ಳುವ ಗುಣವನ್ನು ಪಡೆದಿದೆ. ಕಥಾನಾಯಕಿ ಚೆನ್ನಕ್ಕನ ಪಾತ್ರ ಓದುಗರ ಮನಸ್ಸಿನಲ್ಲಿ ಉಳಿಯುತ್ತದೆ.ಚೆನ್ನಕ್ಕನ ಮಗ, ಕ್ರಿಕೆಟ್ ಪ್ರಿಯ-ಮುರುಗೇಶನ ಪಾತ್ರವೂ ಕಣ್ಣಿಗೆ ಕಟ್ಟುತ್ತದೆ. ಕಥೆಯಲ್ಲಿಯ ಘಟನೆಗಳು ನೈಜವಾಗಿವೆ. ಇದೇ ಕಾದಂಬರಿಯನ್ನು ಮೆಚ್ಚಿಕೊಳ್ಳಬೇಕಾದ ಇತ್ಯಾತ್ಮಕ ಅಂಶವೂ ಆಗಿದೆ. ಕಥಾಹಂದರ ವ್ಯಾಪಕತೆ ವಿಸ್ತರಿಸಲು ಸಾಧ್ಯವಿತ್ತು. ಆದರೆ, ಲೇಖಕರು ಎಲ್ಲವನ್ನೂ ಸಂಕ್ಷಿಪ್ತಗೊಳಿಸಿದ್ದಾರೆ. ಇಷ್ಟಾದರೂ ಈ ಬರಹಕ್ಕೆ ಒಂದು ನೆಲೆ ಇದೆ. ಕಲೆ ಇದೆ’ ಎಂದು ಪ್ರಶಂಸಿಸಿದ್ದಾರೆ.
ಲೇಖಕ ನಿಡಸಾಲೆ ಪುಟ್ಟಸ್ವಾಮಯ್ಯ ಅವರು ತುಮಕೂರು ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ನಿಡಸಾಲೆ (ಜನನ: 05-02-1951) ಗ್ರಾಮದವರು. ತಂದೆ- ಮುಳವಾಗಲಯ್ಯ, ತಾಯಿ- ನಿಂಗಮ್ಮ. ನಿಡಸಾಲೆಯಲ್ಲಿ ಪ್ರಾಥಮಿಕ, ಹುಲಿಯೂರುದುರ್ಗದಲ್ಲಿ ಪ್ರೌಢಶಾಲೆಯವರೆಗೆ ವ್ಯಾಸಂಗ ಪೂರ್ಣಗೊಳಿಸಿದರು. 1968ರಲ್ಲಿ ಬೆಂಗಳೂರಿನ ಐ.ಟಿ.ಐ.ನಲ್ಲಿ ತರಬೇತಿ ಪಡೆದು, 1969ರಿಂದ ಕೃಷಿ ಇಲಾಖೆಯಲ್ಲಿ ಉದ್ಯೋಗ ಆರಂಭಿಸಿದರು. ರೇಣುಕಾಚಾರ್ಯ ಸಂಜೆ ಕಾಲೇಜಿನಲ್ಲಿ ಪಿ.ಯು.ಸಿ ತೇರ್ಗಡೆ ಯಾಗಿ ಬಿ.ಕಾಂ.ಗೆ ಸೇರ್ಪಡೆಯಾದರು. ಹಿರಿಯ ಸಾಹಿತಿ ಬಿ.ಜಿ. ಸತ್ಯಮೂರ್ತಿಯವರ ಒಡನಾಟದಲ್ಲಿ 1971ರಿಂದ ಸಾಹಿತ್ಯ ಕೃಷಿ ಆರಂಭಿಸಿದ ಅವರು ಸಣ್ಣ ಕಥೆ, ನಾಟಕ, ಕಾದಂಬರಿ ಸೇರಿದಂತೆ ಸಾಹಿತ್ಯ ವಿವಿಧ ಪ್ರಕಾರಗಳಲ್ಲಿ ಕೃತಿ ರಚಿಸಿದ್ದಾರೆ. ಕೃತಿಗಳು: ಗೊಲ್ಲಳ್ಳಿ ತೋಟ’, ‘ಸಾಧನೆಯ ...
READ MORE