ಲೇಖಕ, ಚಿಂತಕ ಡಾ. ವಿ. ಮುನಿವೆಂಕಟಪ್ಪ ಅವರ ಕೃತಿ-ಸಾಮಾಜಿಕ ಚಳವಳಿಗಳು. ಸ್ವತಃ ಲೇಖಕರು ದಲಿತ ಚಳವಳಿ, ಬಹುಜನ ಚಳವಳೀ ಹೀಗೆ ಚಳವಳಿಯ ಹಿನ್ನೆಲೆಯಿಂದ ಬದವರು. ವಿಶೇಷವಾಗಿ ದಲಿತ ಚಳವಳಿಯ ಅನಿವಾರ್ಯತೆ ಹಾಗೂ ಅಗತ್ಯತೆಯನ್ನು ಪ್ರತಿಪಾದಿಸುತ್ತಲೇ ಬಂದವರು. ಸುಮಾರು 1970 ರಲ್ಲಿ ಕರ್ನಾಟಕದಲ್ಲಿ ಆರಂಭವಾದ ದಲಿತ ಚಳವಳಿಯು ಬಂಡಾಯ ಗೆಳೆಯರೊಂದಿಗೆ ಕೂಡಿ ಶೋಷಿತ ವರ್ಗದಲ್ಲಿ ಜಾಗೃತಿ ಮೂಡಿಸಿತು. ನಂತರದ ದಿನಗಳಲ್ಲಿ ಸೂಕ್ತ ನಾಯಕತ್ವದ ಅಭಾವ ಕಾಣಿಸಿಕೊಂಡು ಚಳವಳಿ ಕ್ರಮೇಣ ಬಲಹೀನವಾಗುತ್ತಾ ಬಂದಿದ್ದು ಈಗ ಇತಿಹಾಸ. ಚಳವಳಿಯೊಂದರ ಏಳು-ಬೀಳು ಕುರಿತಂತೆ ಅತ್ಯಂತ ಮಾರ್ಮಿಕವಾಗಿ ವಿಶ್ಲೇಷಿಸಿರುವ ಕೃತಿ ಇದು.
ಲೇಖಕ, ಚಿಂತಕ ವಿ. ಮುನಿವೆಂಕಟಪ್ಪ ಅವರು ಸೈದ್ಧಾಂತಿಕ ಬದ್ಧತೆಯನ್ನು ಉಸಿರಾಗಿಸಿಕೊಂಡವರು. ಕೋಲಾರ ತಾಲೂಕಿನ ಎಡಹಳ್ಳಿಯವರು. ಕೃತಿಗಳು: ಮಹಿಳಾ ಸಬಲೀಕರಣ, ದಲಿತ ಚಳವಳಿ: ಒಂದು ಅವಲೋಕನ, ಸಾಮಾಜಿಕ ದಾರ್ಶನಿಕರು, ವಿಶ್ವಚೇತನ ಬುದ್ಧ, ಮಹಾ ಮಾನವ ಬುದ್ಧ, ಮಹಾಮಾನವ ಬಸವಣ್ಣ, ಶರಣಧರ್ಮ ಚರಿತ್ರೆ, ದಲಿತ ಚಳವಳಿ ಮತ್ತು ಇತರೆ ಲೇಖನಗಳು ಬಹುಜನ ಭಾರತ, ಬಹುಜನ ಚಳವಳಿ, ಬಹುಜನ ಸಮಾಜ, ಅಂಬೇಡ್ಕರ ಪರಿಕಲ್ಪನೆ ಹೀಗೆ ಹತ್ತು ಹಲವು ಕೃತಿಗಳ ಮೂಲಕ ಓದುಗರ ಸ್ವಾಭಿಮಾನವನ್ನು ಬಡಿದೆಬ್ಬಿಸುತ್ತಾರೆ. ದಲಿತ ಚಳವಳಿ ನಡೆದು ಬಂದ ದಾರಿಯ ಚರಿತ್ರೆಯನ್ನು ಸುಮಾರು 17 ಸಂಪುಟಗಳಲ್ಲಿ ದಾಖಲಿಸಿದ್ದು ಇವರ ಓದಿನ ...
READ MORE