ಬ್ರಿಟಿಷ್ ಭಾರತದಲ್ಲಿ ದಲಿತರನ್ನು ಮನುಷ್ಯರನ್ನಾಗಿ ಮಾಡುವ ಮೊದಲ ದಿಟ್ಟ ಪ್ರಯತ್ನ ಮಹಾರಾಷ್ಟ್ರದಲ್ಲಿ ನಡೆಯಿತು. ಇದಕ್ಕೆ ಕಾರಣರಾದವರು ಮಹಾತ್ಮ ಜ್ಯೋತಿರಾವ್ ಫುಲೆ ಹಾಗೂ ಸಾವಿತ್ರಿ ಫುಲೆ. ಹೆಣ್ಣು ಮಕ್ಕಳಿಗೂ ಶಿಕ್ಷಣ ಸಿಗಬೇಕು ಎಂಬ ಮಹತ್ವಾಕಾಂಕ್ಷೆಯನ್ನು ಸಾಕಾರಗೊಳಿಸಿದ ದಿಟ್ಟ ಮಹಿಳೆ ಸಾವಿತ್ರಿ ಬಾ ಫುಲೆ.
ಜಾತಿ ತಾರತಮ್ಯದ ವಿರುದ್ಧ ಸೆಟೆದು ನಿಂತು, ಮಹಿಳೆಯರಿಗೂ ಶಿಕ್ಷಣ ಒದಗಿಸುವ ನಿಟ್ಟಿನಲ್ಲಿ ಶ್ರಮವಹಿಸಿದವರು. ದಮನಕ್ಕೆ ಒಳಗಾಗಿದ್ದ ದಲಿತರಿಗೆ, ಹೆಣ್ಣುಮಕ್ಕಳಿಗೆ ಅವರ ಹಕ್ಕುಗಳನ್ನು ನೆನಪಿಸಿ, ಅದನ್ನು ದಕ್ಕುವಂತೆ ಮಾಡಿದ ಕ್ರಾಂತಿಕಾರಿ ಮಹಿಳೆ ಸಾವಿತ್ರಿಬಾಯಿ ಫುಲೆ !
1848ರಲ್ಲಿ ಹೆಣ್ಣುಮಕ್ಕಳಿಗಾಗಿ ಮೊದಲ ಶಾಲೆಯನ್ನು ಆರಂಭಿಸುತ್ತಾರೆ. ಮೊದಲ ಮಹಿಳಾ ಅಧ್ಯಾಪಕಿಯಾಗಿ ಹೆಣ್ಣುಮಕ್ಕಳೂ ಕೆಲಸ ಮಾಡಲು ಅರ್ಹರು ಎನ್ನುವುದನ್ನು ತೋರಿಸುತ್ತಾರೆ. ಮರಾಠಿ ಭಾಷೆಯಲ್ಲಿ ಕವನಗಳನ್ನು ಬರೆದು ಕವಯಿತ್ರಿಯಾಗುತ್ತಾರೆ. ಸಾವಿತ್ರಿಬಾಯಿ ಅವರ ಹೋರಾಟದ ಬದುಕನ್ನು ಗೀತಾ ಶೆಣೈ ಅವರು ಈ ಕೃತಿಯಲ್ಲಿ ಕಟ್ಟಿಕೊಟ್ಟಿದ್ದಾರೆ.
ಗೀತಾ ಶೆಣೈ ಕನ್ನಡದ ಪ್ರಮುಖ ಲೇಖಕಿ. ಇವರು 1954 ಜೂಬ್ 13 ರಂದು ದಕ್ಷಿಣ ಜಿಲ್ಲೆಯಲ್ಲಿ ಜನಿಸಿದರು. ಹಂಪಿಯಿಂದ ಕನ್ನಡ ಭಾಷೆ ಮತ್ತು ಸಾಹಿತ್ಯದಲ್ಲಿ ಪಿಹೆಚ್.ಡಿ, ಪದವಿ ಪಡೆದಿದ್ದಾರೆ. ಇಂದಿರಾಗಾಂಧಿ ಮಹಿಳಾ ಅಧ್ಯಯನದಲ್ಲಿ ಸಿಡಬ್ಲ್ಯೂಇಡಿ ಕೋರ್ಸ್ ಮುಗಿಸಿದ್ದಾರೆ, ಜೀವನ ಚರಿತ್ರೆ, ಅನುವಾದ ಮತ್ತು ಮಹಿಳಾ ಅಧ್ಯಯನ ಇತ್ಯಾದಿ ಪ್ರಕಾರಗಳಲ್ಲಿ 20ಕ್ಕೂ ಹೆಚ್ಚು ಗ್ರಂಥಗಳನ್ನು ಪ್ರಕಟಿಸಿದ್ದಾರೆ. ಇವರ ಮೊದಲ ಕೃತಿ ಝುಂಪಾ ಲಾಹಿರಿಯವರ ಇಂಟರ್ಪ್ರಿಟರ್ ಆಫ್ ಮ್ಯಾಲಡೀಸ್ ಕಥಾಸಂಕಲನದ ಅನುವಾದ `ಬೇನೆಗಳ ದುಭಾಷಿ'. ಬೇನೆಗಳ ದುಭಾಷಿ, ಪರಿಸರ ಅರ್ಥಶಾಸ್ತ್, ಮಧ್ಯಕಾಲೀನ ಭಾರತ, ಸಮಾಜಶಾಸ್ತ್ರದ ಸ್ಥಾಪಕ ಪಿತಾಮಹರು, ಪ್ರಾರಂಭಿಕ ಹಂತದ ...
READ MORE