‘ಸಹಿತ ಸಂವಾದ’ ಲೇಖಕ ಅಜಕ್ಕಳ ಗಿರೀಶ ಭಟ್ ಅವರ ಲೇಖನ ಸಂಕಲನ. ಸಮಾಜ ಮತ್ತು ಸಂಸ್ಕೃತಿಗಳಿಗೆ ಸಂಬಂಧಿಸಿದ ಹಲವು ಅಂಶಗಳ ಬಗ್ಗೆ ಕನ್ನಡದ ಬಹಳಷ್ಟು ಮುಂಚೂಣಿ ಲೇಖಕರು ಕೆಲವು ನಿಲುವುಗಳನ್ನು ಮುಂದಿಡುತ್ತಾ ಬಂದಿದ್ದಾರೆ. ಅಂಥ ಕೆಲವು ನಿಲುವುಗಳ ಬಗ್ಗೆ ಭಿನ್ನಾಭಿಪ್ರಾಯವಿರುವ ಗಿರೀಶ ಭಟ್, ತಮ್ಮ ನಿಲುವುಗಳನ್ನು ಈ ಲೇಖನಗಳಲ್ಲಿ ದಾಖಲಿಸಿದ್ದಾರೆ. ವೈಚಾರಿಕ ಸಂವಾದಗಳು ಯಾವ ದಿಕ್ಕಿನಲ್ಲಿ ಸಾಗಿದರೆ ಸಮುದಾಯಗಳ ನಡುವಿನ ಸಹಬಾಳ್ವೆಯ ಸೊಗಸು ಹಾಗೂ ಸಾಮರಸ್ಯ ಹೆಚ್ಚಬಹುದು ಎಂಬ ನಿಲುವುಗಳನ್ನು ಈ ಕೃತಿಯಲ್ಲಿ ಕಾಣಬಹುದು.
ಅಜಕ್ಕಳ ಗಿರೀಶ್ ಭಟ್ ಅವರು ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನವರು. ವೃತ್ತಿಯಲ್ಲಿ ಕನ್ನಡ ಅಧ್ಯಾಪಕರು. ಬಂಟ್ವಾಳ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಿನ್ಸಿಪಾಲ್ ಆಗಿದ್ದರು. ಸದ್ಯ ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಅಧ್ಯಕ್ಷರಾಗಿದ್ದಾರೆ. ಮೈಸೂರು ವಿಶ್ವ ವಿದ್ಯಾಲಯದಲ್ಲಿ ಅಂಚೆ ತೆರಪಿನ ಶಿಕ್ಷಣದ ಮೂಲಕ ಇಂಗ್ಲಿಷ್ ಸ್ನಾತಕೋತ್ತರ ಪದವಿ ಪಡೆದರು. ಡಾ. ಡಿ.ಆರ್. ನಾಗರಾಜ್ ಕುರಿತು ಒಂದು ಅಧ್ಯಯನದ ಬಗ್ಗೆ ಮಹಾಪ್ರಬಂಧವನ್ನು ರಚಿಸಿ ಡಾ. ಶಿವರಾಮಶೆಟ್ಟಿಯವರ ಮಾರ್ಗದರ್ಶನದಲ್ಲಿ ಮಂಗಳೂರು ವಿಶ್ವವಿದ್ಯಾಲಯದಿಂದ ಪಿಎಚ್.ಡಿ. ಪದವಿ ಪಡೆದರು. ಭಾಷೆ, ಸಾಹಿತ್ಯ, ಸಂಸ್ಕೃತಿ ಕುರಿತು ಲೇಖನಗಳನ್ನು ಬರೆಯತೊಡಗಿದ ಅವರ ಐವತ್ತಕ್ಕೂ ಹೆಚ್ಚು ಲೇಖನಗಳು ...
READ MORE