ಎಸ್.ಎಲ್. ಭೈರಪ್ಪ ಅವರ ತತ್ವಶಾಸ್ತ್ರ ಕೃತಿ ʻಸಾಹಿತ್ಯ ಮತ್ತು ಪ್ರತೀಕʼ. ಭೈರಪ್ಪ ಅವರು ಇಲ್ಲಿ ಸಾಹಿತ್ಯ ಮತ್ತು ಪ್ರತೀಕಗಳ ಪರಸ್ಪರ ಸಂಬಂಧ ಕುರಿತು ಸಾಹಿತ್ಯ ಮೀಮಾಂಸೆಯ ದೃಷ್ಟಿಯಿಂದ ವಿಸ್ತಾರವಾಗಿ ಚರ್ಚಿಸಿದ್ದಾರೆ.
ಜನಪ್ರಿಯ ಕಾದಂಬರಿಕಾರ ಎಸ್.ಎಲ್. ಭೈರಪ್ಪ ಅವರು ಮೀಮಾಂಸಕರೂ ಹೌದು. ಹಾಸನ ಜಿಲ್ಲೆ ಚೆನ್ನರಾಯಪಟ್ಟಣದ ಸಂತೇಶಿವರ ಗ್ರಾಮದಲ್ಲಿ 1931ರ ಆಗಸ್ಟ್ 20ರಂದು ಜನಿಸಿದರು. ತಂದೆ ಲಿಂಗಣ್ಣಯ್ಯ- ತಾಯಿ ಗೌರಮ್ಮ. ತಮ್ಮ ಹುಟ್ಟೂರಿನ ಸುತ್ತಮುತ್ತಲ ಶಾಲೆಗಳಲ್ಲಿ ಪ್ರಾಥಮಿಕ ವಿದ್ಯಾಭ್ಯಾಸ ಮುಗಿಸಿ ಮೈಸೂರಿಗೆ ಬಂದು ಶಾರದಾವಿಲಾಸ ಪ್ರೌಢಶಾಲೆಯಲ್ಲಿ ಓದಿ, ಮಹಾರಾಜ ಕಾಲೇಜಿನಲ್ಲಿ ಬಿ.ಎ. ಮಾಡಿ, ಮೈಸೂರು ವಿಶ್ವವಿದ್ಯಾನಿಲಯದಿಂದ ಎಂ.ಎ. ಪದವಿ ಗಳಿಸಿದರು. ಅನಂತರ ಹುಬ್ಬಳ್ಳಿಯ ಕಾಡುಸಿದ್ಧೇಶ್ವರ ಕಾಲೇಜಿನಲ್ಲಿ ಅಧ್ಯಾಪಕ (1958-60), ಗುಜರಾತಿನ ಸರ್ದಾರ್ ಪಟೇಲ್ ವಿಶ್ವವಿದ್ಯಾಲಯದಲ್ಲಿ ಉಪನ್ಯಾಸಕ (1960-66), ದೆಹಲಿಯ ರಾಷ್ಟ್ರೀಯ ಶಿಕ್ಷಣ ಮತ್ತು ತರಬೇತಿ ಶಿಕ್ಷಣ ಸಂಸ್ಥೆಯಲ್ಲಿ ಉಪಪ್ರಾಧ್ಯಾಪಕ (1967-1971) ...
READ MORE