ಲೇಖಕ ಸ. ಸ. ಮಾಳವಾಡ ಅವರ ಸಾಹಿತ್ಯ ಪ್ರಬಂಧ ಕೃತಿ ʼಸಾಹಿತ್ಯ ಸಮಾಲೋಚನೆʼ. ಪುಸ್ತಕವು ಮಾಳವಾಡ ಅವರ ಪ್ರಬಂಧಗಳ ಸಂಗ್ರಹವಾಗಿದೆ. ಕನ್ನಡ ಭಾಷಾ ಸಾಹಿತ್ಯದ ಮೂಲ, ಬೆಳವಣಿಗೆ, ಹಳೆಗನ್ನಡ ಹಾಗೂ ಅದರ ಪ್ರಭಾವ ಹೀಗೆ ಸಾಹಿತ್ಯಕ್ಕೆ ಸಂಬಂಧಪಟ್ಟ ಹಲವಾರು ವಿಚಾರಗಳನ್ನು ಇಲ್ಲಿ ಚರ್ಚಿಸಲಾಗಿದೆ. ಜೊತೆಗೆ ಕನ್ನಡದ ಹಿರಿಯ ಸಾಹಿತಿಗಳು ಅವರ ಕೊಡುಗೆಗಳ ಬಗ್ಗೆಯೂ ಕೃತಿಯಲ್ಲಿ ಹೇಳಲಾಗಿದೆ.
ಸಾಹಿತಿ ಸ.ಸ. ಮಾಳವಾಡರು ಹುಟ್ಟಿದ್ದು ಧಾರವಾಡ ಜಿಲ್ಲೆಯ ಮೆಣಸಗಿಯಲ್ಲಿ. ತಂದೆ ಸಂಗನ ಬಸಪ್ಪ, ತಾಯಿ- ಕಾಳಮ್ಮ. ಪ್ರಾರಂಭಿಕ ಶಿಕ್ಷಣವನ್ನು ಗೋವನ ಕೊಪ್ಪ, ಗುಳೇದಗುಡ್ಡ, ಬಾಗಲಕೋಟೆ, ವಿಜಾಪುರಗಳಲ್ಲಿ ಪಡೆದರು. ಧಾರವಾಡದಲ್ಲಿ ಎಂ.ಎ. ಪದವಿ ಪಡೆದರು. ಕೆಲಕಾಲ ಮಾಧ್ಯಮಿಕ ಕಾಲೇಜು ಶಿಕ್ಷಕರಾಗಿದ್ದರು. ಧಾರವಾಡದ ಕರ್ನಾಟಕ ಕಾಲೇಜಿನಲ್ಲಿ ಕನ್ನಡ ಪ್ರಾಧ್ಯಾಪಕರಾಗಿ, ಪ್ರಾಚಾರ್ಯರಾಗಿ, ನಿವೃತ್ತರಾದರು. ಯು.ಜಿ.ಸಿ. ಪ್ರಾಧ್ಯಾಪಕರಾಗಿ ಕನ್ನಡ ಸಂಶೋಧನಾ ಸಂಸ್ಥೆಯ ನಿರ್ದೇಶಕರಾಗಿ, ಕರ್ನಾಟಕ ವಿಶ್ವವಿದ್ಯಾಲಯದ ಪಠ್ಯಪುಸ್ತಕ ನಿರ್ದೇಶನಾಲಯದ ಸಂಸ್ಥಾಪಕ ಗೌರವ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದರು. ಪರರಾಜ್ಯದ ಪಠ್ಯಪುಸ್ತಕ ರಚನಾ ಸಮಿತಿಗಳಲ್ಲಿ ಸೇವೆ ಸಲ್ಲಿಸಿದರು. ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡದ ಆಕಾಶವಾಣಿ ನಿಲಯಗಳ ಸ್ಥಾಪನೆಯಲ್ಲಿ ಮಹತ್ತರ ಪಾತ್ರ ವಹಿಸಿದ್ದರು. ‘ಕರ್ನಾಟಕ ಸಾಹಿತ್ಯ-ಸಂಸ್ಕೃತಿ ದರ್ಶನ’ ...
READ MORE