‘ಸಕಾರಣ’ ಲೇಖಕ ಚಿದಾನಂದ ಸಾಲಿ ಅವರ ವಿಮರ್ಶಾ ಲೇಖನಗಳ ಸಂಕಲನ. ‘ಕಳೆದ ಒಂದೂವರೆ ದಶಕದಿಂದ ಸಾಹಿತ್ಯ, ಶಿಕ್ಷಣ, ಸಮಾಜ ಮತ್ತು ಅನುವಾದ ಕ್ಷೇತ್ರಗಳಿಗೆ ಪ್ರತಿಸ್ಪಂದಿಸಿ ಬರೆದ ಬರೆಹಗಳು ಇಲ್ಲಿ ಸಂಕಲನಗೊಂಡಿವೆ. ಆಳವಾದ ಒಳನೋಟದ ವಿಮರ್ಶಾ ಪ್ರಜ್ಞೆಗಿಂತ ತಕ್ಷಣಕ್ಕೆ ಸ್ಪಂದಿಸುವ ಜರ್ನಲಿಸ್ಟಿಕ್ ಗುಣವೇ ಇಲ್ಲಿ ಢಾಳಾಗಿ ಕಾಣಿಸುತ್ತದೆ ಅಂತ ಪ್ರಕಟಣಾಪೂರ್ವದಲ್ಲಿ ಮತ್ತೊಮ್ಮೆ ಓದಿ ನೋಡಿದಾಗ ನನಗೆ ತೀವ್ರವಾಗಿ ಅನಿಸಿದೆ’ ಎನ್ನುತ್ತಾರೆ ಲೇಖಕರು.
ಕವಿ-ಕತೆಗಾರ- ಅನುವಾದಕ ಚಿದಾನಂದ ಸಾಲಿ ಅವರು ಮೂಲತಃ ರಾಯಚೂರು ಜಿಲ್ಲೆಯ ಸಿರವಾರದವರು. ಗಣಿತಶಾಸ್ತ್ರದಲ್ಲಿ ಎಂಎಸ್ಸಿ, ಪತ್ರಿಕೋದ್ಯಮ, ಕನ್ನಡದಲ್ಲಿ ಎಂ.ಎ. ಪದವಿ ಪಡೆದಿರುವ ಅವರು ಎಂಫಿಲ್, ಪಿಜಿಡಿಎಚ್ ಇ ಮತ್ತು ಪಿಜಿಡಿಎಚ್ ಆರ್ ಎಂ ಪದವೀಧರರು. ಕೆಲಕಾಲ ಪತ್ರಕರ್ತರಾಗಿದ್ದ ಅವರು ಸರ್ಕಾರಿ ಪ್ರೌಢಶಾಲೆಯ ಗಣಿತ ಶಿಕ್ಷಕರು. ಪ್ರಜಾವಾಣಿ ಕಥಾಸ್ಪರ್ಧೆ, ಕ್ರೈಸ್ಟ್ ಕಾಲೇಜ್ ಕಾವ್ಯಸ್ಪರ್ಧೆ, ಕನ್ನಡಪ್ರಭ ಕಥಾಸ್ಪರ್ಧೆ, ಸಂಕ್ರಮಣ ಕಾವ್ಯಸ್ಪರ್ಧೆ, ಸಂಚಯ ಕಾವ್ಯಸ್ಪರ್ಧೆ, ಪ್ರಜಾವಾಣಿ ಕಾವ್ಯಸ್ಪರ್ಧೆ ಮುಂತಾದವುಗಳಲ್ಲಿ ಬಹುಮಾನ ಪಡೆದಿದ್ದಾರೆ. ರೆ. ..(ಕವಿತೆ); ಮೌನ(ಕನ್ನಡ ಗಜಲ್); ಧರೆಗೆ ನಿದ್ರೆಯು ಇಲ್ಲ(ಕಥಾಸಂಕಲನ), ಚೌಕಟ್ಟಿನಾಚೆ (ಬೆಟ್ಟದೂರರ ಕಲಾಕೃತಿಗಳನ್ನು ಕುರಿತು); ಶಿಕ್ಷಣ ಮತ್ತು ಜೀವನಶೈಲಿ ...
READ MORE