ಸಾಲಗುಂದಿ ಗುರುಪೀರಾ ಖಾದರಿ ತತ್ವಪದಗಳು

Author : ರಹಮತ್ ತರೀಕೆರೆ

Pages 354

₹ 65.00




Year of Publication: 2017
Published by: ರಾಷ್ಟ್ರೀಯ ಸಂತಕವಿ ಕನಕದಾಸ ಅಧ್ಯಯನ ಮತ್ತು ಸಂಶೋಧನಾ ಕೇಂದ್ರ
Address: ಎರಡನೆಯ ಮಹಡಿ, ಚಾಲುಕ್ಯ ವಿಭಾಗ, ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರು-2
Phone: 08022773147

Synopsys

ಗುರು ಪೀರಾ ಖಾದರಿ ಮತ್ತು ತತ್ವಪದಗಳು- ಲೇಖಕ ರಹಮತ್ ತೆರೀಕೆರೆ ಅವರು ಸಂಪಾದಿತ ಕೃತಿ. ಗುರು ಖಾದರ್ ಪೀರಾ ಎಂದೇ ಖ್ಯಾತಿಯ (1822-1896) ಈ ಕವಿಯ ಪೂರ್ಣ ಹೆಸರು-ಆಲಾ ಹಜರತ್ ಇಮಾಮ್ ಸೈಯದ್ ಅಬ್ದುಲ್ ಖಾದಿರ್ ಖಾದರಿ ಹಸನಿ ಉಲ್ ಹುಸೈನಿ ಹಾಷಮಿ . ಇವರ ಮೂಲ ವಂಶಸ್ಥರು ಇರಾಕ್ ರಾಜಧಾನಿ ಬಗ್ದಾದ್ ನವರು. 

ಭಾರತಕ್ಕೆ ಬಂದ ಈ ವಂಶಸ್ಥರು ನಂತರ ರಾಯಚೂರು ಜಿಲ್ಲೆ ಸಿಂಧನೂರು ತಾಲ್ಲೂಕಿನ ಸಾಲಗುಂದಾ ಗ್ರಾಮದಲ್ಲಿ ನೆಲೆಸಿತು. ಸೂಫಿಗಳ ಪ್ರೇಮತತ್ತ್ವವನ್ನು ಸಾರಿದವರು. ಗುರು ಖಾದರಿಪೀರಾ ಅವರು ಕನ್ನಡ, ಹಿಂದಿ, ಉರ್ದು, ಸಂಸ್ಕೃತ, ಪಾರ್ಸಿ ಮತ್ತು ಅರಬಿ ಹೀಗೆ ಬಹುಭಾಷೆ ಪರಿಣಿತರು. ಇಸ್ಲಾಂ ತತ್ತ್ವಜ್ಞಾನವನ್ನು ವ್ಯಾಖ್ಯಾನಿಸಿದರು. 25-07-1893 ರಂದು ಇಹಲೋಕ ತ್ಯಜಿಸಿದರು. ಗುರು ಖಾದರಿಪೀರಾ ಅವರು ವಚನಗಳನ್ನು ಸೂಕ್ಷ್ಮವಾಗಿ ಅಧ್ಯಯನ ಮಾಡಿ ತತ್ವಗಳ ಮೂಲಕ ತತ್ವದರ್ಶನ ಮಾಡಿಸಿದ್ದು ಈ ಕೃತಿ. .

 

About the Author

ರಹಮತ್ ತರೀಕೆರೆ
(26 August 1959)

ಹಂಪಿ ಕನ್ನಡ ವಿಶ್ವವಿದ್ಯಾಲಯದ ಸಾಹಿತ್ಯ ಅಧ್ಯಯನ ವಿಭಾಗದ ಪ್ರಾಧ್ಯಾಪಕರಾಗಿರುವ ರಹಮತ್ ತರೀಕೆರೆ ಅವರು ಸಂಶೋಧಕ, ವಿಮರ್ಶಕ, ಲೇಖಕ. ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲ್ಲೂಕಿನ ಸಮತಳದವರಾದ (ಜ. 1959) ಅವರು ಮೈಸೂರು ವಿಶ್ವವಿದ್ಯಾಲಯದಿಂದ ಏಳು ಚಿನ್ನದ ಪದಕಗಳೊಂದಿಗೆ ಎಂ.ಎ. ಪದವಿ ಪಡೆದಿದ್ದಾರೆ. ಸ್ಪಷ್ಟ ಸೈದ್ಧಾಂತಿಕ ನಿಲುವು ಹೊಂದಿರುವ ರಹಮತ್ ಅವರು ಬಂಡಾಯ ಸಾಹಿತ್ಯ ಸಂಘಟನೆಯಲ್ಲಿದ್ದವರು. ಪಶ್ಚಿಮದ ಲೇಖಕರಿಗಿಂತ ಭಾರತೀಯ ಭಾಷೆಗಳ ಲೇಖಕರಿಂದ ಕಲಿಯುವ ಅಗತ್ಯವಿದೆಯೆಂದು ಭಾವಿಸುವ ‘ದೇಸಿವಾದಿ’ ಲೇಖಕ. ‘ಆಧುನಿಕ ಕನ್ನಡ ಕಾವ್ಯ ಮತ್ತು ಪ್ರತಿಭಟನೆ’ ವಿಷಯದ ಮೇಲೆ ಪ್ರಬಂಧ ಬರೆದು ಪಿಎಚ್.ಡಿ. ಪದವಿ ಪಡೆದಿರುವ ಅವರ ಮೊದಲ ...

READ MORE

Related Books