ಕಾಂತಾವರ ಕನ್ನಡ ಸಂಘದ ಯೋಜನೆ ‘ನಾಡಿಗೆ ನಮಸ್ಕಾರ’ ಶತಮಾನೋತ್ಸವದಲ್ಲಿ ನವ್ಯಕವಿ, ಚಿತ್ರಕಲಾವಿದ, ನಾಟಕಕಾರ, ಕಾದಂಬರಿಕಾರರಾಗಿ ಕನ್ನಡ ಸಾಂಸ್ಕೃತಿಕ ಲೋಕಕ್ಕೆ ಪರಿಚಿತರಾಗಿರುವ ಪ್ರೊ. ರಾಮದಾಸ ಕುಂಡಂತಾಯರ ಜೀವನ ಚರಿತ್ರೆಯನ್ನು ಕಾತ್ಯಾಯಿನಿ ಕುಂಜಿಬೆಟ್ಟು ಅವರು ಈ ಕೃತಿಯಲ್ಲಿ ಚಿತ್ರಿಸಿದ್ದಾರೆ.
ಡಾ. ಕಾತ್ಯಾಯಿನಿ ಕುಂಜಿಬೆಟ್ಟು ಅವರ ಹುಟ್ಟೂರು ಉಡುಪಿಯ ಕಾಪು ಬಳಿಯ ಕರಂದಾಡಿ, ಕನ್ನಡದಲ್ಲಿ ಸ್ನಾತಕೋತ್ತರ ಪದವಿ, ಮುಂಬೈ ಅಖಿಲ ಭಾರತ ಗಂಧರ್ವ ಮಹಾವಿದ್ಯಾಲಯದಿಂದ ಹಿಂದೂಸ್ಥಾನಿ ಶಾಸ್ತ್ರೀಯ ಸಂಗೀತ “ವಿಶಾರದ' ಪದವಿ. ತುಳು ಕಾದಂಬರಿ 'ಕಬರ್ಗತ್ತಲೆ'ಗೆ ತುಳುಕೂಟ(ರಿ) ಉಡುಪಿಯ 'ಪಣಿಯಾಡಿ ಪ್ರಶಸ್ತಿ’, ಕನ್ನಡ ಕಾದಂಬರಿ 'ತೊಗಲುಗೊಂಬೆ'ಗೆ ಬೆಂಗಳೂರು ಕನ್ನಡ ಸಾಹಿತ್ಯ ಪರಿಷತ್ತಿನ 'ಮಲ್ಲಿಕಾ' ಪ್ರಶಸ್ತಿ ಹಾಗೂ ಮೂಡಬಿದರೆಯ ವರ್ಧಮಾನ ಪ್ರತಿಷ್ಠಾನದ 'ಯುವ ವರ್ಧಮಾನ ಪ್ರಶಸ್ತಿ'; 'ಒಳದನಿಯ ಪಲುಕುಗಳು' ವಿಮರ್ಶಾಕೃತಿಗೆ ಕ.ಸಾ.ಪ. ಲೀಲಾವತಿ ಗುರುಸಿದ್ದಪ್ಪ ಸಿಂಧೂರ ದತ್ತಿ ಪ್ರಶಸ್ತಿ, ಡಾ. ದ. ರಾ. ಬೇಂದ್ರೆ ರಾಷ್ಟ್ರೀಯ ಸ್ಮಾರಕ ಟ್ರಸ್ಟಿನ ದ.ರಾ.ಬೇಂದ್ರೆ ...
READ MORE