ಸಮಕಾಲೀನ ಕನ್ನಡ ಕವಿತೆ-1- ಅರವತ್ತುಮೂರು ಕವನಗಳನ್ನು ಒಳಗೊಂಡ ಒಂದು ಸಂಕಲನ. ಈ ಸಂಕಲನದಲ್ಲಿ ಕಳೆದ ಅರ್ಧ ಶತಮಾನಕ್ಕೂ ಮಿಕ್ಕ ಹೊಸಗನ್ನಡದ ಕಾವ್ಯ ಪರಂಪರೆಯಲ್ಲಿ ಬರೆಯುತ್ತಾ ಬಂದ ಬಹುಪಾಲು ಕವಿಗಳ ಕವನಗಳಿವೆ. ಈ ಅರ್ಧ ಶತಮಾನಕ್ಕೂ ಮೀರಿದ ಅವಧಿಯಲ್ಲಿ ಕನ್ನಡ ಕಾವ್ಯ ನವೋದಯ, ಪ್ರಗತಿಶೀಲ ಮತ್ತು ನವ್ಯ ಎಂದು ಅಭ್ಯಾಸದ ಅನುಕೂಲಕ್ಕೆ ಗುರುತಿಸಬಹುದಾದ ಮೂರು ಸಾಹಿತ್ಯಿಕ ಚಳುವಳಿಗಳ ಮೂಲಕ ತನ್ನ ಶಕ್ತಿ-ಸಾಮರ್ಥ್ಯಗಳನ್ನು ಅತ್ಯಂತ ವೈವಿಧ್ಯಮಯವಾಗಿ ಪ್ರಕಟಿಸಲಾಗಿದೆ. ಈ ಸಂಗ್ರಹದಲ್ಲಿ ಮೂರು ಸಾಹಿತ್ಯಿಕ ಚಳುವಳಿಗಳ ದೃಷ್ಟಿ ಧೋರಣೆಗಳನ್ನು ಗುರುತಿಸಬಹುದಾಗಿದೆ. ಮತ್ತು ಮೂರನ್ನೂ ಮೀರಿದ ನಿಲುವುಗಳು ಈ ಕವನಗಳಲ್ಲಿವೆ.
ಸಮನ್ವಯ ಕವಿಗಳಲ್ಲಿ ಒಬ್ಬರು ಎಂದು ಗುರುತಿಸಲಾಗುವ ಡಾ.ಜಿ.ಎಸ್. ಶಿವರುದ್ರಪ್ಪ ಅವರು ವಿಮರ್ಶಕರಾಗಿಯೂ ಗಣನೀಯ ಸಾಧನೆ ಮಾಡಿದ್ದಾರೆ. ಗದ್ಯ-ಪದ್ಯಗಳೆರಡರಲ್ಲಿಯೂ ಮಾಗಿದ ಪ್ರತಿಭೆ ಅವರದು. ತಂದೆ ಗುಗ್ಗುರಿ ಶಾಂತವೀರಪ್ಪ ಮತ್ತು ತಾಯಿ ವೀರಮ್ಮ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ 1926ರ ಫೆಬ್ರುವರಿ 7ರಂದು ಜನಿಸಿದರು. ಶಾಲಾ ಉಪಾಧ್ಯಾಯರ ಮಗನಾದ ಜಿ.ಎಸ್.ಎಸ್ ಅವರು ಎಸ್.ಎಸ್.ಎಲ್.ಸಿ ಮುಗಿಯುತ್ತಿದ್ದಂತೆಯೇ ಬಡತನದ ಕಾರಣದಿಂದ ಸರಕಾರಿ ನೌಕರಿ ಹಿಡಿಯಬೇಕಾಯಿತು. ಗುಬ್ಬಿ ತಾಲ್ಲೂಕು ಕಚೇರಿಯಲ್ಲಿ ಗುಮಾಸ್ತರಾಗಿ ಸೇರಿದರು. ಆದರೆ ಓದಲೇಬೇಕೆಂಬ ಅದಮ್ಯ ಆಸೆಯಿಂದ ಕೆಲಸಕ್ಕೆ ವಿದಾಯ ಹೇಳಿ ಮೈಸೂರು ಮಹಾರಾಜ ಕಾಲೇಜಿನಲ್ಲಿ ಓದನ್ನು ಮುಂದುವರೆಸಿ ಬಿ.ಎ. ಪದವಿ (1949), ಸ್ವರ್ಣಪದಕದೊಂದಿಗೆ ...
READ MORE