ವಸುಂಧರಾ ಭೂಪತಿ ಅವರು ಮಹಿಳೆಯರಿಗೆ ಸಂಬಂಧಿಸಿದ ಹಲವು ಸಮಸ್ಯೆಗಳಿಗೆ ಇಲ್ಲಿ ಉತ್ತರವನ್ನು ನೀಡಿದ್ದಾರೆ. ಗ್ಯಾಸ್ಟಿಕ್, ಮುಟ್ಟಿನ ಸಮಸ್ಯೆ, ಮಕ್ಕಳ ಏಕಾಗ್ರತೆಯ ಸಮಸ್ಯೆ ಮೊದಲದ ಸಮಸ್ಯೆಗಳ ಬಗ್ಗೆ ತಿಳಿದುಕೊಂಡರೆ, ಅವುಗಳಿಂದ ನಾವು ಹೇಗೆ ಮುಕ್ತಿ ಪಡೆಯಬಹುದು ಎಂಬುದನ್ನು ವಿವರಿಸಿದ್ದಾರೆ.
ಲೈಂಗಿಕ ಕ್ರಿಯೆ, ಮೂಲ್ಯವ್ಯಾಧಿ, ದೇಹ ಉಷ್ಣವಾಗುವುದು, ಮಂಡಿನೋವು, ಕಿಡ್ನಿಯಲ್ಲಿ ಕಲ್ಲು , ಮೈತುರಿಕೆ ಮೊದಲಾದ ಆರೋಗ್ಯ ಸಮಸ್ಯೆಗಳಿಗೆ ಇರುವ ಪರಿಹಾರದ ಕುರಿತು ವಿವರಗಳನ್ನು ನೀಡಿದ್ಧಾರೆ.
ಡಾ. ವಸುಂಧರಾ ಭೂಪತಿ ಕರ್ನಾಟಕದ ರಾಯಚೂರಿನಲ್ಲಿ 1962 ರ ಜೂನ್ 5 ರಂದು ಜನಿಸಿದರು. ಇವರು ಬರೆದಿರುವ ವಿಜ್ಞಾನ ಪ್ರಥಮ ಚಿಕಿತ್ಸೆ, ಶುಚಿತ್ವ, ಆರೋಗ್ಯ-ಆರೈಕೆ ಲೇಖನಗಳು ವಾರಪತ್ರಿಕೆ ಹಾಗೂ ದಿನಪತ್ರಿಕೆಗಳಲ್ಲಿ ಪ್ರಕಟಗೊಂಡಿದೆ. ವಸುಂದರಾ ಭೂಪತಿಯವರು ವೈದ್ಯಕೀಯ ಸಾಹಿತ್ಯ ಮಾಲೆ, ಕನ್ನಡ ಪುಸ್ತಕ ಪ್ರಾಧಿಕಾರ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಮಾಸಪತ್ರಿಕೆ ‘ಬಾಲ ವಿಜ್ಞಾನ’, ಆರೋಗ್ಯ ಅನುರಾಗ ಮಾಸಪತ್ರಿಕೆ, ಆಯುರ್ವೇದ ಮತ್ತು ಯೋಗ ಮಾಸಪತ್ರಿಕೆ, ವಿಜ್ಞಾನ ಲೋಕ ತ್ರೈಮಾಸಿಕ ಪತ್ರಿಕೆ ಹಾಗೂ ಆರೋಗ್ಯ ವಿಜ್ಞಾನ ತ್ರೈಮಾಸಿಕ ಪತ್ರಿಕೆಗಳ ಸಂಪಾದಕ ಮಂಡಳಿಯ ಸದಸ್ಯರಾಗಿದ್ದಾರೆ. ಮತ್ತು ವೈದ್ಯ ಲೋಕ ಮಾಸಪತ್ರಿಕೆಯ ಸಂಪಾದಕರಾಗಿ ...
READ MORE