ಕನ್ನಡ ಕಾದಂಬರಿ ವಲಯದಲ್ಲಿ ವಿಶೇಷವಾಗಿ ಮಹಿಳೆ ಕಾದಂಬರಿಕಾರರಲ್ಲಿ ಅತ್ಯಂತ ಪ್ರಮುಖ ಹೆಸರು -ಸಾಯಿಸುತೆ ಅವರದ್ದು. ‘ಸಮತಾ ಮತ್ತು ಇತರ ಕಿರು ಕಾದಂಬರಿಗಳು’ ಅವರ ಕಿರು ಕಾದಂಬರಿಗಳ ಸಂಗ್ರಹ. ಹೆಚ್ಚು ತಂತ್ರಗಳ ಬಳಕೆ ಇಲ್ಲದ ಸರಳ ಭಾಷೆ, ಆಕರ್ಷಕವಾದ ನಿರೂಪಣಾ ಶೈಲಿಯು ಓದಿಗರನ್ನು ಸೆಳೆಯುವುದು ಇವರ ಕಾದಂಬರಿಗಳ ವೈಶಿಷ್ಟ್ಯ. ಸಾಮಾಜಿಕ ವಿದ್ಯಮಾನಗಳು ಹಾಗೂ ಕೌಟುಂಬಿಕ ಸಂಗತಿಗಳು ಕಾದಂಬರಿಯ ವಸ್ತುಗಳಾಗಿವೆ.
ಕನ್ನಡ ಕಾದಂಬರಿ ಲೋಕದ ಅನನ್ಯ ಪ್ರತಿಭೆ ಸಾಯಿಸುತೆ. ತಮ್ಮ ಕಾದಂಬರಿಗಳ ಮೂಲಕ ಹೆಂಗಳೆಯರ ಮೆಚ್ಚುಗೆಗೆ ಪಾತ್ರವಾದ ಲೇಖಕಿ. ಅವರು ಕನ್ನಡ ಓದುಗ ವಲಯ ವಿಸ್ತರಿಸಿದ ಬರಹಗಾರ್ತಿ ಕೂಡ. ಸಾಯಿಸುತೆ ಅವರು ಕೋಲಾರದಲ್ಲಿ 1942ರ ಆಗಸ್ಟ್ 20ರಂದು ಜನಿಸಿದರು. ಅವರ ಹೆಸರು ರತ್ನ. ’ಸಾಯಿಸುತೆ’ ಎಂಬುದು ಕಾವ್ಯನಾಮ. ತಂದೆ ವೆಂಕಟಪ್ಪ ಮತ್ತು ತಾಯಿ ಲಕ್ಷಮ್ಮ. ಕೋಲಾರದಲ್ಲಿ ಪ್ರಾಥಮಿಕ ಶಿಕ್ಷಣ ಪಡೆದ ಅವರು, ಓದುವ ಹಂಬಲದಿಂದ ಕಾಲೇಜು ಮೆಟ್ಟಿಲೇರಿದ್ದರು. ಆದರೆ, 16ನೇ ವಯಸ್ಸಿಗೆ ಮದುವೆಯಾದರು. ನಂತರದಲ್ಲಿ ಅವರಿಗೆ ನೆರವಾದವರು ಸಾಹಿತ್ಯಪ್ರೇಮಿ ಪತಿ ಅಶ್ವತ್ಥನಾರಾಯಣ. ಮನೆಯಲ್ಲಿದ್ದ ಸಾಹಿತ್ಯ ಪುಸ್ತಕಗಳನ್ನು ಓದುತ್ತಾ ಸಾಹಿತ್ಯದ ಒಲವು ಬೆಳೆಸಿಕೊಂಡ ...
READ MORE