ಕನ್ನಡ ಮತ್ತು ತಮಿಳು ಭಾಷೆಯಲ್ಲಿ ಪದವೀಧರರಾಗಿದ್ದ ಹಾರೋಗದ್ದೆ ಮಾನಪ್ಪ ನಾಯಕರು ಭಾಷಾ ಶಾಸ್ತ್ರದಲ್ಲಿ ಸಂಶೋಧನೆ ಮಾಡಿದವರು. ಕನ್ನಡ ಪ್ರಾಧ್ಯಾಪಕರಾಗಿ, ಕನ್ನಡ ಅಧ್ಯಯನ ಸಂಸ್ಥೆಯ ಮುಖ್ಯಸ್ಥರಾಗಿ, ಕೇಂದ್ರ ಸಾಹಿತ್ಯ ಅಕಾಡೆಮಿಯಲ್ಲಿ ಸಂಚಾಲಕರಾಗಿ, ಜ್ಞಾನ ಪೀಠ ಪ್ರಶಸ್ತಿ ಸಮಿತಿಯಲ್ಲಿ ಸಲಹೆಗಾರರಾಗಿ ದೇಶದುದ್ದಕ್ಕೂ ಓಡಾಡಿದವರು. ಡಾ. ನಾಯಕರು ಕನ್ನಡ ಭಾಷೆ, ಸಾಹಿತ್ಯ, ಭಾಷಾ ವಿಜ್ಞಾನ, ಜಾನಪದ ಭಾಷಾಂತರ, ಭಾರತೀಯ ಸಾಹಿತ್ಯ ಅಧ್ಯಯನ, ತರಗತಿಗಳಲ್ಲಿ ಪಾಠ ಹೇಳಿದ್ದಾರೆ. ಕರ್ನಾಟಕ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿ, ಕರ್ನಾಟಕ ವಿಜ್ಞಾನ ಪರಿಷತ್ತಿನ ಅಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ. ಪ್ರಸ್ತುತ ಅವರ ಲೇಖನಗಳ ಸಂಕಲನ ಸಂಪ್ರತಿ , 2007ರಲ್ಲಿ ಎರಡನೇ ಮುದ್ರಣ ಕಂಡಿದೆ.
ತಮ್ಮ ಅಂಕಣ ಬರಹಗಳಿಂದ ಪ್ರಸಿದ್ಧರಾಗಿದ್ದ ಹಾ.ಮಾ. ನಾಯಕರು (ಹಾರೋಗದ್ದೆ ಮಾನಪ್ಪನಾಯಕ) ಸಾಹಿತ್ಯ- ಸಾಂಸ್ಕೃತಿಕ ಲೋಕದ ದೊಡ್ಡ ಹೆಸರಾಗಿದ್ದರು. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಹಾರೋಗದ್ದೆಯಲ್ಲಿ 1931ರ ಸೆಪ್ಟೆಂಬರ್ 12ರಂದು ಜನಿಸಿದರು. ತಂದೆ ಶ್ರೀನಿವಾಸನಾಯಕ, ತಾಯಿ ರುಕ್ಮಿಣಿಯಮ್ಮ. ಶಿವಮೊಗ್ಗೆಯಲ್ಲಿ ಶಾಲಾ ವಿದ್ಯಾಭ್ಯಾಸವನ್ನು ಪೂರೈಸಿ ಕಾಲೇಜು ವಿದ್ಯಾಭ್ಯಾಸವನ್ನು ಮೈಸೂರಿನಲ್ಲಿಯೂ ಸ್ನಾತಕೋತ್ತರ ಶಿಕ್ಷಣವನ್ನು ಕಲ್ಕತ್ತೆಯಲ್ಲಿಯೂ ಮಾಡಿ ಭಾಷಾವಿಜ್ಞಾನದಲ್ಲಿ ಎಂ.ಎ. (1958)ಪದವಿಯನ್ನು ಪಡೆದರು. ತುಮಕೂರಿನಲ್ಲಿ ಕನ್ನಡ ಅಧ್ಯಾಪಕ (1955) ಆಗುವ ಮೂಲಕ ತಮ್ಮ ವೃತ್ತಿಯನ್ನು ಪ್ರಾರಂಭಿಸಿದ್ದ ಅವರು ಅನಂತರ ಪ್ರವಾಚಕ, ಪ್ರಾಧ್ಯಾಪಕ, ನಿರ್ದೇಶಕರಾಗಿ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಸೇವೆ ಸಲ್ಲಿಸಿದ್ದರು. ಗುಲ್ಬರ್ಗ ವಿಶ್ವವಿದ್ಯಾಲಯದಲ್ಲಿ ಕುಲಪತಿ (1984) ...
READ MORE