ಕಳೆದ ಶತಮಾನದಲ್ಲಿ ಸಾಹಿತ್ಯಪ್ರೇಮಿಗಳ ಮೇಲೆ ಅತ್ಯಂತ ಹೆಚ್ಚು ಪ್ರಭಾವ ಬೀರಿದ ಕನ್ನಡವೂ ಸೇರಿದಂತೆ ಬೇರೆ ಬೇರೆ ಭಾಷೆಗಳ ಪ್ರಮುಖ ಲೇಖಕಿಯರ ಬದುಕು ಮತ್ತು ಬರಹದ ಸಂಕ್ಷಿಪ್ತ ಪರಿಚಯವನ್ನು ವ್ಯಕ್ತಿಚಿತ್ರದ ರೂಪದಲ್ಲಿ ನೀಡುವ ಪ್ರಯತ್ನವನ್ನು ಲೇಖಕಿ ಗೀತಾ ಶೆಣೈ ಅವರು ಮಾಡಿದ್ದನ್ನು ಕೃತಿಯಲ್ಲಿ ಕಾಣಬಹುದು.
ಗೀತಾ ಶೆಣೈ ಕನ್ನಡದ ಪ್ರಮುಖ ಲೇಖಕಿ. ಇವರು 1954 ಜೂಬ್ 13 ರಂದು ದಕ್ಷಿಣ ಜಿಲ್ಲೆಯಲ್ಲಿ ಜನಿಸಿದರು. ಹಂಪಿಯಿಂದ ಕನ್ನಡ ಭಾಷೆ ಮತ್ತು ಸಾಹಿತ್ಯದಲ್ಲಿ ಪಿಹೆಚ್.ಡಿ, ಪದವಿ ಪಡೆದಿದ್ದಾರೆ. ಇಂದಿರಾಗಾಂಧಿ ಮಹಿಳಾ ಅಧ್ಯಯನದಲ್ಲಿ ಸಿಡಬ್ಲ್ಯೂಇಡಿ ಕೋರ್ಸ್ ಮುಗಿಸಿದ್ದಾರೆ, ಜೀವನ ಚರಿತ್ರೆ, ಅನುವಾದ ಮತ್ತು ಮಹಿಳಾ ಅಧ್ಯಯನ ಇತ್ಯಾದಿ ಪ್ರಕಾರಗಳಲ್ಲಿ 20ಕ್ಕೂ ಹೆಚ್ಚು ಗ್ರಂಥಗಳನ್ನು ಪ್ರಕಟಿಸಿದ್ದಾರೆ. ಇವರ ಮೊದಲ ಕೃತಿ ಝುಂಪಾ ಲಾಹಿರಿಯವರ ಇಂಟರ್‍ಪ್ರಿಟರ್ ಆಫ್ ಮ್ಯಾಲಡೀಸ್ ಕಥಾಸಂಕಲನದ ಅನುವಾದ `ಬೇನೆಗಳ ದುಭಾಷಿ'. ಬೇನೆಗಳ ದುಭಾಷಿ, ಪರಿಸರ ಅರ್ಥಶಾಸ್ತ್, ಮಧ್ಯಕಾಲೀನ ಭಾರತ, ಸಮಾಜಶಾಸ್ತ್ರದ ಸ್ಥಾಪಕ ಪಿತಾಮಹರು, ಪ್ರಾರಂಭಿಕ ಹಂತದ ...
READ MORE