ಮಾಸ್ತಿ ವೆಂಕಟೇಶ ಅಯ್ಯಂಗಾರ (ಶ್ರೀನಿವಾಸ) ಅವರು ಬರೆದ ಕೃತಿ-ಸಣ್ಣಕಥೆಗಳ ಸಂಪುಟ-4. ಕನ್ನಡ ಸಾಹಿತ್ಯದಲ್ಲಿ ಸಣ್ಣ ಕಥೆಗಳ ಜನಕ ಎಂದೇ ಪ್ರಸಿದ್ಧರು. ಅತ್ಯಂತ ನವಿರಾದ ಭಾವಗಳಿಂದ, ಅರ್ಥಪೂರ್ಣ ಪಾತ್ರಗಳ ಸೃಷ್ಟಿಯಿಂದ, ಆತ್ಮೀಯವಾದ ನಿರೂಪಣಾ ಶೈಲಿಯಿಂದ, ಕುತೂಹಲ ಕೆರಳಿಸುವ ಸನ್ನಿವೇಶಗಳ ಜೋಡಣೆಯಿಂದ ಹಾಗೂ ಓದುಗರ ಮನವನ್ನು ಸೆಳೆಯುವ ಅತ್ಯಂತ ಪರಿಣಾಮಕಾರಿ ಪ್ರಭಾವದಿಂದ ಲೇಖಕರು ಸಣ್ಣ ಕಥೆಗಳ ವಲಯದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ.
‘ಶ್ರೀನಿವಾಸ’ ಕಾವ್ಯನಾಮದ ಮಾಸ್ತಿ ವೆಂಕಟೇಶ್ ಅಯ್ಯಂಗಾರ್ ಅವರು ಕನ್ನಡ ಸಣ್ಣಕತೆಗಳ ರಚನೆಗೆ ಖಚಿತ ರೂಪ ನೀಡುವುದಕ್ಕೆ ಕಾರಣರಾದ ಆದ್ಯರು. ಕೋಲಾರದ ಮಾಲೂರಿನ ಮಾಸ್ತಿ ಗ್ರಾಮದಲ್ಲಿ 1891ರ ಜೂನ್ 8ರಂದು ಜನಿಸಿದರು. ತಂದೆ ರಾಮಸ್ವಾಮಿ ಅಯ್ಯಂಗಾರ್ ತಾಯಿ ತಿರುಮಲ್ಲಮ್ಮ. ಪ್ರೌಢವಿದ್ಯಾಭ್ಯಾಸವನ್ನು ಮೈಸೂರಿನ ವೆಸ್ಲಿಯನ್ ಹೈಸ್ಕೂಲಿನಲ್ಲೂ, ಎಫ್.ಎ. ಅನ್ನು ಮಹಾರಾಜ ಕಾಲೇಜಿನಲ್ಲೂ ಮುಗಿಸಿ ಬೆಂಗಳೂರಿನ ಸೆಂಟ್ರಲ್ ಕಾಲೇಜಿನಲ್ಲಿ ಬಿ.ಎ ಮುಗಿಸಿ ಮದರಾಸಿನ ಪ್ರೆಸಿಡೆನ್ಸಿ ಕಾಲೇಜಿನಲ್ಲಿ ಎಂಎ ಪದವಿ (1914) ಪಡೆದರು. ಮೈಸೂರು ಸರ್ಕಾರದ ಅಸಿಸ್ಟೆಂಟ್ ಕಮೀಷನರ್ (1914) ಆಗಿ ಕೆಲಸಕ್ಕೆ ಸೇರಿದರು. ಸರ್ ಎಂ. ವಿಶ್ವೇಶ್ವರಯ್ಯನವರ ಕೈಕೆಳಗೆ ಕೆಲಸ ಮಾಡಿದ ...
READ MORE