ಅನುಭಾವಿ ಕವಿ ಮತ್ತು ಸಂತರಾಗಿ ಜನಮಾನಸದಲ್ಲಿ ಆಳವಾಗಿ ಬೇರೂರಿದವರು ಕಬೀರದಾಸರು. ಅವರ ಬದುಕು, ಚಿಂತನೆಗಳನ್ನು ತಿಳಿಸುತ್ತ, ಅವರ ಕೃತಿ-ಗೀತೆಗಳನ್ನು ಪರಿಚಯಿಸುತ್ತ ಜೀವನ ಚಿತ್ರಣವನ್ನು ಲೇಖಕ ಭಾಲಚಂದ್ರ ಜಯಶೆಟ್ಟಿ ಅವರು ಮನೋಜ್ಞವಾಗಿ ಚಿತ್ರಿಸಿದ್ದಾರೆ.
ಲೇಖಕ, ಅನುವಾದಕ ಭಾಲಚಂದ್ರ ಜಯಶೆಟ್ಟಿ ಅವರು ಮೂಲತಃ ಬೀದರ ಜಿಲ್ಲೆಯವರು. ಬೀದರ ಜಿಲ್ಲೆಯ ಬಸವ ಕಲ್ಯಾಣ ತಾಲೂಕಿನ ರಾಜೇಶ್ವರದಲ್ಲಿ ಜನಿಸಿದ ಅವರು ಪ್ರಾಥಮಿಕ ಶಿಕ್ಷಣವನ್ನು ರಾಜೇಶ್ವರ, ಬಸವಕಲ್ಯಾಣದಲ್ಲಿ ಪಡೆದರು. ಆನಂತರ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಪ್ರಥಮ ಶ್ರೇಣಿಯಲ್ಲಿ ಎಂ.ಎ ಪದವಿ ಪಡೆದರು. ಕನ್ನಡ, ಹಿಂದಿ, ಮರಾಠಿ ಭಾಷೆಗಳಲ್ಲಿ ಪ್ರಭುತ್ವ ಪಡೆದಿದ್ದ ಅವರು ಶಿಕ್ಷಣ ಇಲಾಖೆಯಲ್ಲಿ ವೃತ್ತಿಯನ್ನು ಆರಂಭಿಸಿದರು. ಸರಕಾರಿ ಪದವಿ ಮಹಾವಿದ್ಯಾಲಯ ಯಾದಗಿರಿ, ಸರಕಾರಿ ಮಹಾವಿದ್ಯಾಲಯ ಗುಲಬರ್ಗಾ, ಸರಕಾರಿ ಪ್ರಥಮ ದರ್ಜೆ ಕಾಲೇಜು ಬೀದರ ಮುಂತಾದೆಡೆ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿ 1997ರಲ್ಲಿ ನಿವೃತ್ತಿಯಾದರು. ಹಲವಾರು ಶಿಕ್ಷಣ ಸಂಸ್ಥೆಗಳ ...
READ MORE