ಖ್ಯಾತ ಕಾದಂಬರಿಕಾರ ಚದುರಂಗ ಅವರ ಕಾದಂಬರಿ-ಸರ್ವಮಂಗಳಾ. 1958ರಲ್ಲಿ ಬರೆದ ಈ ಕಾದಂಬರಿ, ಅದೇ ಹೆಸರಿನಿಂದ 1968 ರಲ್ಲಿ ಚಲನಚಿತ್ರವಾಯಿತು. ಈ ಚಿತ್ರಕ್ಕೆ ರಾಜ್ಯ ಚಲನಚಿತ್ರ ಪ್ರಶಸ್ತಿ ದೊರೆತಿದೆ. ಕೌಟುಂಬಿಕ ಕಥಾ ವಸ್ತುವನ್ನು ಒಳಗೊಂಡ ಈ ಕಾದಂಬರಿಯು ನಿರೂಪಣಾ ಶೈಲಿ, ಪಾತ್ರಗಳ ಸೃಷ್ಟಿ, ಸನ್ನಿವೇಶಗಳ ಜೋಡಣೆ, ಪರಿಣಾಮಕಾರಿ ಸಂಭಾಷಣೆಯೊಂದಿಗೆ ಓದುಗರ ಗಮನ ಸೆಳೆಯುತ್ತದೆ. ಈ ಮೊದಲು ಈ ಕಾದಂಬರಿಯನ್ನು ಕನ್ನಡ ಸಾಹಿತ್ಯ ಪರಿಷತ್ತು ಪ್ರಕಟಿಸಿತ್ತು.
ಸಣ್ಣ ಕಥೆಗಾರ, ಕಾದಂಬರಿಕಾರ, ನಾಟಕಕಾರ ಆದ ಚದುರಂಗರು (ಎಂ. ಸುಬ್ರಹ್ಮಣ್ಯರಾಜೇ ಅರಸ್ ಅವರು) ಕನ್ನಡದ ಮಹತ್ವದ ಲೇಖಕರಲ್ಲಿ ಒಬ್ಬರು. ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮದಲ್ಲಿ 1916ರ ಜನವರಿ 1ರಂದು ಜನಿಸಿದರು. ತಂದೆ ಮುದ್ದುರಾಜೇ ಅರಸ್ ಮತ್ತು ತಾಯಿ ಮರುದೇವಿ ಅರಸ್. ರಾಜಮನೆತನದ ಒಡನಾಟವಿದ್ದ ಇವರ ವಿದ್ಯಾಭ್ಯಾಸ ಮೈಸೂರಿನಲ್ಲಿ ನಡೆಯಿತು. ಮೈಸೂರಿನ ರಾಯಲ್ ಸ್ಕೂಲ್, ಬೆಂಗಳೂರಿನ ಇಂಟರ್ ಮೀಡಿಯೇಟ್ ಕಾಲೇಜು, ಮೈಸೂರು ಮಹಾರಾಜ ಕಾಲೇಜುಗಳಲ್ಲಿ ವ್ಯಾಸಂಗ ಮಾಡಿ ಬಿ.ಎ. ಪದವಿ ಪಡೆದರು. ಕಾನೂನು ಮತ್ತು ಸ್ನಾತಕೋತ್ತರ ಶಿಕ್ಷಣಕ್ಕಾಗಿ ಪುಣೆಗೆ ಹೋದರು. ಕಾರಣಾಂತರಗಳಿಂದ ಶಿಕ್ಷಣ ಪೂರ್ಣಗೊಳ್ಳಲಿಲ್ಲ. ಗಾಂಧಿ ...
READ MORE