ಭಾರತದ ಮೊದಲ ಅಕ್ಷರದಾತೆ, ಮಹಿಳಾ ಶಿಕ್ಷಣಕ್ಕಾಗಿ ಹೋರಾಡಿದ ಶಿಕ್ಷಕಿ ಸಾವಿತ್ರಿ ಬಾಯಿ ಫುಲೆ ಅವರ ಹುಟ್ಟು, ಬಾಲ್ಯ, ಸಾಂಸಾರಿಕ ಜೀವನ ಹಾಗೂ ಮುಖ್ಯವಾಗಿ ಹೆಣ್ಣುಮಕ್ಕಳಿಗೂ ಶಿಕ್ಷಣ ಸಿಗಲೇ ಬೇಕು ಎಂದು ಹೋರಾಡಿದ ಅವರ ಜೀವನದ ಸಂಕ್ಷಿಪ್ತ ಮಾಹಿತಿ ಈ ಕೃತಿಯಲ್ಲಿದೆ. ಹೆಣ್ಣು ಮಕ್ಕಳಿಗೆ ಪಾಠ ಕಳಿಸುವುದಕ್ಕಾಗಿ ಶಾಲೆಗೆ ಹೋಗುತ್ತಿದ್ದ ಸಮಯದಲ್ಲಿ ಗ್ರಾಮದವರ ಬೇಸರದ ಮಾತುಗಳು, ಅವಮಾನಗಳೆಲ್ಲವನ್ನು ಸಹಿಸಿ ಶಿಕ್ಷಣ ನೀಡಿದ ಸಾಧಕಿ ಸಾವಿತ್ರಿ ಬಾಯಿ. ಅವರ ಬಗ್ಗೆ ತಿಳಿದುಕೊಳ್ಳಲು ಈ ಕೃತಿ ಉಪಯುಕ್ತವಾಗಿದೆ.
ಲೇಖಕಿ, ಕವಯತ್ರಿ ಎಚ್.ಎಸ್.ಅನುಪಮಾ ಅವರು ವೃತ್ತಿಯಲ್ಲಿ ವೈದ್ಯೆ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಕವಲಕ್ಕಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ವೃತ್ತಿಯ ಜೊತೆಗೆ ಸಾಹಿತ್ಯ ಕ್ಷೇತ್ರದಲ್ಲಿಯೂ ತಮ್ಮನ್ನು ತೊಡಗಿಸಿಕೊಂಡಿರುವ ಅವರು ಕಾಡುಹಕ್ಕಿಯ ಹಾಡು, ಸಹಗಮನ, ಬುದ್ಧ ಚರಿತೆ (ಖಂಡ ಕಾವ್ಯ), ನೆಗೆವ ಪಾದದ ಜಿಗಿತ, ಸಬರಮತಿ- ನೀಳ್ಗವಿತೆ ಎಂಬ ಐದು ಕವನ ಸಂಕಲನಗಳು, ಹೂವರಳಿದ್ದಕ್ಕೆ ಯಾಕೆ ಸಾಕ್ಷಿ?, ಚಿವುಟಿದಷ್ಟೂ ಚಿಗುರು, ಕೋವಿಡ್: ಡಾಕ್ಟರ್ ಡೈರಿ - ಗ್ರಾಮಭಾರತದ ಕಥೆಗಳು ಎಂಬ ಮೂರು ಕಥಾಸಂಕಲನಗಳು, ಡಾ. ಬಾಬಾಸಾಹೇಬ್ ಅಂಬೇಡ್ಕರ್ – ಕಿರು ಜೀವನ ಚರಿತ್ರೆ , ಮೋಚಕನ ಹೆಜ್ಜೆಗಳು - ಡಾ. ...
READ MORE